ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಸಾರಿಗೆ ಸೌಲಭ್ಯ ಕಲ್ಪಿಸಲು ಕ್ರಮ: ರಘುಮೂರ್ತಿ

Last Updated 13 ಸೆಪ್ಟೆಂಬರ್ 2017, 10:19 IST
ಅಕ್ಷರ ಗಾತ್ರ

ಚಳ್ಳಕೆರೆ: ‘ಪ್ರಯಾಣಿಕರೂ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲೇ ಸಂಚರಿಸುವಂತಾಗಲು ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಬಸ್‌ ಸಂಚಾರ ವ್ಯವಸ್ಥೆ ಕಲ್ಪಿಸಬೇಕು’ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.

ಪಾವಗಡ ರಸ್ತೆಯ ಕೆ.ಎಸ್‌.ಆರ್‌.ಟಿಸಿ ಘಟಕದ ಬಳಿ ₹ 50 ಲಕ್ಷ ವೆಚ್ಚದಲ್ಲಿ ಘಟಕದ ವ್ಯವಸ್ಥಾಪಕರಿಗೆ ವಸತಿಗೃಹ ನಿರ್ಮಾಣಕ್ಕೆ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಪ್ರತಿ ಹಳ್ಳಿಗಳಿಗೂ ಸಾರಿಗೆ ಸಂಸ್ಥೆಯ ಬಸ್‌ಗಳ ವ್ಯವಸ್ಥೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ನಗರದ ಪಾವಗಡ ರಸ್ತೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಡಿಪೊ ಮತ್ತು ಬೆಂಗಳೂರು ರಸ್ತೆಯಲ್ಲಿ ಸುಸಜ್ಜಿತವಾದ ಬಸ್‌ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ.

ಇದರ ಉದ್ಘಾಟಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ನೆರವೇರಿಸಲಿದ್ದಾರೆ. ನಂತರ ಗ್ರಾಮವಾರು ಸಮೀಕ್ಷೆ ನಡೆಸಿ ಎಲ್ಲಾ ಕಡೆಗೂ ಗ್ರಾಮೀಣ ಸಾರಿಗೆಯ ವ್ಯವಸ್ಥೆ ಮಾಡಲಾಗುವುದು’ ಎಂದು ಅವರು ಭರವಸೆ ನೀಡಿದರು.

ಇದರಿಂದ ನಗರದ ಶಾಲಾ– ಕಾಲೇಜಿಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಎಲ್ಲರೂ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಸುವಂತೆ ಉತ್ತೇಜನ ನೀಡಲಾಗುವುದು. ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅವರು ಘಟಕದ ವ್ಯವಸ್ಥಾಪಕರಿಗೆ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಿ.ವೀರೇಶ್, ಎಪಿಎಂಸಿ ಅಧ್ಯಕ್ಷ ರೆಡ್ಡಿಹಳ್ಳಿ ಶಿವಣ್ಣ, ಸಹಾಯಕ ಎಂಜಿನಿಯರ್ ಗುರುಪ್ರಸಾದ್, ಸಹಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT