ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಿಕೆಯ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ: ಶ್ವೇತಾ ಬಂಡಿ

Last Updated 13 ಸೆಪ್ಟೆಂಬರ್ 2017, 10:29 IST
ಅಕ್ಷರ ಗಾತ್ರ

ಹೊಸನಗರ: ಕಲಿಕೆಯ ಜತೆಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗೂ ಹೆಚ್ಚಿನ ಆದ್ಯತೆ ನೀಡಿ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ಶ್ವೇತಾ ಬಂಡಿ ಸಲಹೆ ನೀಡಿದರು.
ಪಟ್ಟಣದ ನೆಹರೂ ಮೈದಾನದಲ್ಲಿ ಬುಧವಾರ ವಿವಿಧ ಇಲಾಖೆಗಳ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕು ಪಂಚಾಯ್ತಿ ಅಧಕ್ಷ ವಾಸಪ್ಪ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾ ಸ್ಫೂರ್ತಿಯಿಂದ ಆಟದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹಾಲಗದ್ದೆ ಉಮೇಶ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ತಾ.ಪಂ. ಸದಸ್ಯ ಏರಗಿ ಉಮೇಶ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷೆ ಸುಜಾತಾ ಉಡುಪ ಕ್ರೀಡಾ ಪ್ರತಿಜ್ಞೆ ಬೋಧಿಸಿದರು.

ಪಟ್ಟಣ ಪಂಚಾಯ್ತಿ ಸದಸ್ಯ ಸಯ್ಯದ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರೇಣುಕಪ್ಪ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ, ಉಪಾಧ್ಯಕ್ಷೆ ಲಲ್ಲಿ ಡಿಸೋಜ, ಕಾರ್ಯದರ್ಶಿ ಮಹ್ಮದ್‌ ಅಲ್ತಾಫ್‌, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಅಶ್ವಿನಿಕುಮಾರ ಮತ್ತಿತರರು ಹಾಜರಿದ್ದರು. ತಾಲ್ಲೂಕು ದೈಹಿಕ ಪರಿವೀಕ್ಷಕ ಈಶ್ವರಪ್ಪ ಸ್ವಾಗತಿಸಿದರು. ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು. ಸಿ.ಆರ್‌.ಪಿ. ರಾಘವೇಂದ್ರ ವಂದಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT