ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಂಡೇರಾವಗೆ ಚನ್ನರೇಣುಕ ಬಸವ ಪ್ರಶಸ್ತಿ

Last Updated 14 ಸೆಪ್ಟೆಂಬರ್ 2017, 7:07 IST
ಅಕ್ಷರ ಗಾತ್ರ

ಬಸವಕಲ್ಯಾಣ: ಹಿರಿಯ ಚಿತ್ರಕಲಾವಿದ ಜಿ.ಎಸ್.ಖಂಡೇರಾವ ಅವರನ್ನು ತಾಲ್ಲೂಕಿನ ಹಾರಕೂಡ ಹಿರೇಮಠ ಸಂಸ್ಥಾನದಿಂದ ನೀಡುವ`ಶ್ರೀಚನ್ನರೇಣುಕ ಬಸವ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

`ಪ್ರಶಸ್ತಿಯು ₹1 ಲಕ್ಷ ನಗದು, 10 ಗ್ರಾಂ ಚಿನ್ನ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದ್ದು ಸೆಪ್ಟೆಂಬರ್ 29 ರಂದು ಮಠದಲ್ಲಿ ನಡೆಯುವ 31 ನೇ ಅನುಭಾವ ಪ್ರಚಾರೋಪನ್ಯಾಸ ಮಾಲೆ ಹಾಗೂ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಖಂಡೇರಾವ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಮಠಾಧಿಪತಿ ಚೆನ್ನವೀರ ಶಿವಾಚಾರ್ಯರು ತಿಳಿಸಿದ್ದಾರೆ.

ಈಗಾಗಲೇ ನಾಡಿನ ವಿವಿಧ ಕ್ಷೇತ್ರದ 6 ಜನ ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ. ಈ ಸಲ ಚಿತ್ರಕಲೆಯಲ್ಲಿ ಮಹತ್ವದ ಸಾಧನೆ ಮಾಡಿದ ಇವರನ್ನು ಆಯ್ಕೆ ಮಾಡಲಾಗಿದೆ. ಖಂಡೇರಾವ್ ಅವರು ಕಲಬುರ್ಗಿಯಲ್ಲಿ ಚಿತ್ರಕಲಾ ಸಂಸ್ಥೆ ಕಟ್ಟಿ ಬೆಳೆಸುವ ಜತೆಯಲ್ಲಿ ಉತ್ತಮ ಚಿತ್ರಕಲಾವಿದರೆಂದು ಖ್ಯಾತಿ ಗಳಿಸಿದ್ದಾರೆ. ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಇವರ ಕಲಾಕೃತಿಗಳ ಪ್ರದರ್ಶನಗಳು ನಡೆದಿವೆ. ರಾಜ್ಯೋತ್ಸವ ಪ್ರಶಸ್ತಿ ಕೂಡ ಇವರಿಗೆ ಲಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT