ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್‌ ಸಮೀಪ ಕಸ ಡಂಪಿಂಗ್!

Last Updated 15 ಸೆಪ್ಟೆಂಬರ್ 2017, 9:42 IST
ಅಕ್ಷರ ಗಾತ್ರ

ಪಡುಬಿದ್ರಿ: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಂದ ಸಂಗ್ರಹಿಸಿದ ಕಸವನ್ನು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ಪೂರ್ವ ಬಾಲಕರ ವಸತಿ ನಿಲಯ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ಆವರಣ ಗೋಡೆಯ ಪಕ್ಕದಲ್ಲಿ ಸುರಿಯಲಾಗುತ್ತಿದ್ದು, ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಗಳನ್ನು ಸುರಿಯಲಾಗುತ್ತದೆ ಎಂಬ ದೂರು ಗಳು ಹಲವಾರು ವರ್ಷ ಗಳಿಂದ ಕೇಳಿ ಬರುತ್ತಿತ್ತು. ಈ ನಿಟ್ಟಿ ನಲ್ಲಿ ಇದಕ್ಕೊಂದು ಪರಿಹಾರ ಕಂಡು ಕೊಳ್ಳಲು ಮುಂದಾದ ಗ್ರಾಮ ಪಂಚಾ ಯಿತಿಯು ಆಗಸ್ಟ್‌ ತಿಂಗಳಿಂದ ಮನೆ ಮನೆಗಳಿಂದ ತ್ಯಾಜ್ಯಗಳನ್ನು ಸಂಗ್ರಹಿಸಲು ಮುಂದಾಯಿತು.

ಎರಡು ದಿನಗಳಿಗೊಮ್ಮೆ ಟೆಂಪೋದಲ್ಲಿ ಸಂಗ್ರಹಿಸುವ ತ್ಯಾಜ್ಯಗಳನ್ನು ಮಾರುಕಟ್ಟೆ ಬಳಿಯ ಜನವಸತಿ ಪ್ರದೇಶಗಳಲ್ಲಿ ಸುರಿಯಲಾಗುತ್ತಿದೆ. ಇದರ ಪಕ್ಕದಲ್ಲಿಯೇ ಮೆಟ್ರಿಕ್‌ಪೂರ್ವ ಬಾಲಕರ ವಸತಿ ನಿಲಯವಿದ್ದು, ಮಕ್ಕಳು ಮೂಗು ಮುಚ್ಚಿಕೊಂಡೇ ಇರಬೇಕಾದ ಪರಿಸ್ಥಿತಿ ಬಂದೊದಗಿದೆ. ಈ ಭಾಗದಲ್ಲಿ ತ್ಯಾಜ್ಯಗಳನ್ನು ಸುರಿಯುತ್ತಿದ್ದರಿಂದ ಮಾರಕ ರೋಗ ಹರಡುವ ಭೀತಿಯನ್ನು ವ್ಯಕ್ತಪಡಿಸಿರುವ ಸ್ಥಳೀಯರು, ಈ ಬಗ್ಗೆ ಪಂಚಾಯಿತಿಗೆ ಮನವಿ ಸಲ್ಲಿಸಿ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ತರಕಾರಿ ಮಾರುಕಟ್ಟೆಯ ಬಳಿ ತ್ಯಾಜ್ಯ ಸುರಿಯಲಾಗುತ್ತಿತ್ತು. ಆದರೆ, ಈ ಭಾಗದಲ್ಲಿ ಇದ್ದ ತರಕಾರಿ ಮಾರುಕಟ್ಟೆಯನ್ನು ತೆರವುಗೊಳಿಸಿರುವ ಪಂಚಾಯಿತಿ ಆಡಳಿತ ಅಲ್ಲಿ ಹೊಸ ಕಟ್ಟಡ ನಿರ್ಮಿಸಿದೆ. ಇದರಿಂದಾಗಿ ತ್ಯಾಜ್ಯ ಸುರಿಯಲು ಜಾಗದ ಸಮಸ್ಯೆ ಉಂಟಾಗಿದೆ. ಹೀಗಾಗಿ, ಗ್ರಾಮ ಪಂಚಾ ಯಿತಿ ಪರಿಹಾರ ಕಂಡಿದ್ದು ಮಾತ್ರ ಹಾಸ್ಟೆಲ್‌ ಬಳಿಯ ಸ್ಥಳವನ್ನು. ಇದು ಶಿಕ್ಷಣ ಪ್ರೇಮಿಗಳ ಹಾಗೂ ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

ಶೀಘ್ರ ಪರಿಹಾರ: ತ್ಯಾಜ್ಯಗಳನ್ನು ಅಲ್ಲಲ್ಲಿ ಸುರಿಯುವ ಬಗ್ಗೆ ದೂರುಗಳು ಕೇಳಿ ಬರುತಿತ್ತು. ಕಳೆದ ತಿಂಗಳಿನಿಂದ ಮನೆ, ಮನೆಗಳಿಂದ ಕಸವನ್ನು ಸಂಗ್ರಹಿಸಿ ಒಣ ಮತ್ತು ಹಸಿ ಕಸವನ್ನು ವಿಂಗಡಣೆ ಮಾಡಲಾಗುತ್ತದೆ. ಒಣ ಕಸವನ್ನು ಮಾತ್ರ ಮಾರ್ಕೆಟ್‌ ಪಕ್ಕದಲ್ಲಿ ಹಾಕಲಾಗುತ್ತಿದೆ. ಆದರೆ, ಹಸಿ ಕಸವನ್ನು ಜಗದೀಶ್ ಶೆಟ್ಟಿ ಮತ್ತು ಸುನೀಲ್ ಶೆಟ್ಟಿಯವರ ಗದ್ದೆಯಲ್ಲಿ ಕಾಂಪೋಸ್ಟ್ ಮಾಡಲಾಗುತ್ತಿದೆ. ಒಣ ಕಸಕ್ಕೆ ಶೀಘ್ರದಲ್ಲೇ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅಭಿವೃದ್ಧಿ ಅಧಿಕಾರಿ ಪಂಚಾಕ್ಷರಿ ಸ್ವಾಮಿ ಕೇರಿಮಠ ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT