ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇತುವೆಯಿಂದ ಗ್ರಾಮಗಳ ಅಭಿವೃದ್ಧಿ: ಸಚಿವ

Last Updated 16 ಸೆಪ್ಟೆಂಬರ್ 2017, 9:22 IST
ಅಕ್ಷರ ಗಾತ್ರ

ಆರೂರು(ಬ್ರಹ್ಮಾವರ): ‘ನೀಲಾವರ- ಕೂರಾಡಿ ಸೇತುವೆ ಒಂದು ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಂಡರೆ, ಪರಾರಿ- ಶೀಂಬ್ರ ಸೇತುವೆ ವರ್ಷಾಂತ್ಯದೊಳಗೆ ಪೂರ್ಣಗೊಂಡು ಗ್ರಾಮೀಣ ಭಾಗದ ಅಭಿವೃದ್ದಿಗೆ ಸಹಕಾರಿಯಾಗಲಿದೆ’ ಎಂದು ಸಚಿವ ಪ್ರಮೋದ್ ಹೇಳಿದರು. ಆರೂರು ವಿಷ್ಣುಮೂರ್ತಿ ದೇವಸ್ಥಾನದ ಬಯಲು ರಂಗ ಮಂಟಪದಲ್ಲಿ ಶುಕ್ರವಾರ ಆರೂರು ಗ್ರಾಮ ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಈ ಎರಡು ಸೇತುವೆ ಪೂರ್ಣಗೊಳ್ಳುವುದರಿಂದ ಗ್ರಾಮೀಣ ಪ್ರದೇ ಶ ಗಳಾದ ನೀಲಾವರ, ಎಳ್ಳಂಪಳ್ಳಿ, ಮಂದಾರ್ತಿ,ಆರೂರು,ಕೊಳಲಗಿರಿ, ಹಾವಂಜೆ ಗ್ರಾಮಗಳು ಅಭಿವೃದ್ಧಿ ಯಾಗುವುದರೊದಿಗೆ ಇಲ್ಲಿಯ ಜನತೆಗೆ ಮಣಿಪಾಲ,ಉಡುಪಿ ಹತ್ತಿರವಾಗಲಿದೆ ಎಂದು ಹೇಳಿದರು.

ಹಲವು ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡ್ ಕೀಲಿ ಕೈಯಾಗಿದೆ. ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಹಾಕಿದವರಲ್ಲಿ 1,95 ಮಂದಿಗೆ ಅಂಚೆ ಮೂಲಕ ಮನೆ ಬಾಗಿಲಿಗೆ ಕಾರ್ಡ್ ತಲುಪಿಸಲಾಗಿದೆ’ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಸದಸ್ಯೆ ಗೋಪಿ ಕೆ. ನಾಯ್ಕ, ಜಿಲ್ಲಾ ಕೆಡಿಪಿ ಸದಸ್ಯ ಉಮೇಶ್ ನಾಯ್ಕ, ತಾಲ್ಲೂಕು ಕೆಡಿಪಿ ಸದಸ್ಯ ಬಾಬು ಕೋಟ್ಯಾನ್, ಆರೂರು ದೇಗುಲದ ಆಡಳಿತ ಮೊಕ್ತೇಸರ ಡಾ. ಎಂ.ಪಿ.ರಾಘವೇಂದ್ರ ರಾವ್, ಆರೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ್ ಕುಲಾಲ್, ನೀಲಾವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಮೇಶ್ ಪೂಜಾರಿ, ಬ್ರಹ್ಮಾವರ ವಿಶೇಷ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ತಾಲ್ಲೂಕು ಪಂಚಾಯಿತಿ ಕಾರ್ಯಾನಿರ್ವಹಣಾಧಿಕಾರಿ ಮೋಹನರಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT