ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಆಮದು 3 ಪಟ್ಟು ಹೆಚ್ಚಳ

Last Updated 17 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌–ಆಗಸ್ಟ್‌ ಅವಧಿಯಲ್ಲಿ ಚಿನ್ನದ ಆಮದು ಮೂರು ಪಟ್ಟು ಹೆಚ್ಚಾಗಿದ್ದು ₹97,536 ಕೋಟಿಗಳಿಗೆ ತಲುಪಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ₹32,512 ಕೋಟಿ ಮೌಲ್ಯದ ಚಿನ್ನ ಆಮದಾಗಿತ್ತು.  ಆಗಸ್ಟ್‌ನಲ್ಲಿ ಚಿನ್ನದ ಆಮದು ₹7,104 ಕೋಟಿಗಳಿಂದ ₹12,032 ಕೋಟಿಗಳಿಗೆ ಏರಿಕೆಯಾಗಿದೆ. ಇದರಿಂದ ಅಮದು ಮತ್ತು ರಫ್ತು ನಡುವಣ ಅಂತರ (ವ್ಯಾಪಾರ ಕೊರತೆ) ₹49,280 ಕೋಟಿಗಳಿಂದ ₹77,496 ಕೋಟಿಗಳಿಗೆ ಹೆಚ್ಚಾಗಿದೆ. ಸರಣಿ ಹಬ್ಬಗಳು ಆರಂಭವಾಗುತ್ತಿರುವುದರಿಂದ ಚಿನ್ನದ ಆಮದು ಇನ್ನಷ್ಟು ಏರಿಕೆ ಕಾಣಲಿದೆ.

ಚಾಲ್ತಿ ಖಾತೆ ಕೊರತೆ ಹೆಚ್ಚಳ: ಚಿನ್ನದ ಆಮದು ಪ್ರಮಾಣ ಹೆಚ್ಚುತ್ತಿರುವುದರಿಂದ ಚಾಲ್ತಿ ಖಾತೆ ಕೊರತೆ (ಸಿಎಡಿ) ಏರಿಕೆ ಕಾಣುತ್ತಿದೆ.

ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ  ಚಾಲ್ತಿ ಖಾತೆ ಕೊರತೆ (ಸಿಎಡಿ) ಜಿಡಿಪಿಯ ಶೇ 2.4ಕ್ಕೆ ಏರಿಕೆಯಾಗಿದೆ. ಮೌಲ್ಯದ ಲೆಕ್ಕದಲ್ಲಿ ₹ 91,250 ಕೋಟಿಳಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT