ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕ ವಿದ್ಯಮಾನಗಳ ಪ್ರಭಾವ ನಿರೀಕ್ಷೆ

Last Updated 17 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಈ ವಾರದ ಷೇರುಪೇಟೆ ವಹಿವಾಟಿನ ಮೇಲೆ ಜಾಗತಿಕ ವಿದ್ಯಮಾನಗಳು ಹೆಚ್ಚಿನ ಪ್ರಭಾವ ಬೀರಲಿವೆ ಎಂದು ಮಾರುಕಟ್ಟೆ ಪರಿಣತರು ಹೇಳಿದ್ದಾರೆ.

ಸೇನಾ ಸಾಮರ್ಥ್ಯದಲ್ಲಿ ಅಮೆರಿಕದ ಜತೆ ಉತ್ತರ ಕೊರಿಯಾ ಬಹುತೇಕ ಸಮಬಲ ಸಾಧಿಸಿದೆ. ಮುಂದಿನ ದಿನಗಳಲ್ಲಿಯೂ ಯಾವುದೇ ಒತ್ತಡಗಳಿಗೆ ಮಣಿಯದೆ ಎಲ್ಲ ಪರಮಾಣು ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಉತ್ತರ ಕೊರಿಯಾ ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌ ತಿಳಿಸಿದ್ದಾರೆ. ಈ ಬೆಳವಣಿಗೆ ಜಾಗತಿಕ ಮಟ್ಟದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಇದು ಷೇರುಪೇಟೆಗಳ ಮೇಲೆ ಪ್ರಭಾವ ಬೀರಲಿದೆ.

ಇನ್ನು, ಅಮೆರಿಕದ ಫೆಡರಲ್‌ ರಿಸರ್ವ್ ಈ ವಾರ ಬಡ್ಡಿದರ ಪರಾಮರ್ಶೆ ನಡೆಸಲಿದೆ. ಇದರಿಂದ ಜಾಗತಿಕ ಹೂಡಿಕೆದಾರರ ಚಟುವಟಿಕೆಯ ಸ್ವರೂಪ ನಿರ್ಧಾರವಾಗಲಿದೆ. ಬಡ್ಡಿದರ ಏರಿಕೆ ಆದರೆ ಹೂಡಿಕೆ ಪ್ರಮಾಣ ತಗ್ಗಲಿದೆ. ಇದರಿಂದ ಭಾರತದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ವಿದೇಶಿ ಹೂಡಿಕೆ ಇಳಿಕೆ ಕಾಣಲಿದೆ. ಬಡ್ಡಿದರ ತಗ್ಗಿದರೆ ಹೂಡಿಕೆ ಒಳಹರಿವು ಹೆಚ್ಚಾಗಲಿದೆ.

2017–18ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಂಪೆನಿಗಳ ಹಣಕಾಸು ಸಾಧನೆ ಫಲಿತಾಂಶ ಪ್ರಕಟಣೆ ಅಂತ್ಯವಾಗಿದೆ. ಹೀಗಾಗಿ ಸದ್ಯದ ಮಟ್ಟಗೆ ಜಾಗತಿಕ ಅಂಶಗಳೇ ಷೇರುಪೇಟೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿವೆ ಎಂದು ವಿಶ್ಲೇಷಣೆ ಮಾಡಿದ್ದಾರೆ.

ಕಳೆದ ವಾರ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ ) 585 ಅಂಶ ಮತ್ತು ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 150 ಅಂಶ ಏರಿಕೆ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT