ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉದ್ಯೋಗ ಕಲ್ಪಿಸಲು ಸೂಕ್ತ ಕ್ರಮ’

Last Updated 18 ಸೆಪ್ಟೆಂಬರ್ 2017, 6:26 IST
ಅಕ್ಷರ ಗಾತ್ರ

ಖಾನಾಪುರ: ಕೇಂದ್ರ ಸರ್ಕಾರದಲ್ಲಿ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರನ್ನು ಭಾನುವಾರ ಬಿಜೆಪಿ ಖಾನಾಪುರ ಬ್ಲಾಕ್ ವತಿಯಿಂದ ಆತ್ಮೀಯವಾಗಿ ಸತ್ಕರಿಸಲಾಯಿತು.

ಪಟ್ಟಣದ ಲೋಕಮಾನ್ಯ ಸಭಾಗೃಹ ದಲ್ಲಿ ಪಕ್ಷದ ವತಿಯಿಂದ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಬಿಜೆಪಿ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ನೂತನ ಕೇಂದ್ರ ಸಚಿವರನ್ನು ಸತ್ಕರಿಸಿದರು.

ಪಕ್ಷದ ವತಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಸಚಿವ ಹೆಗಡೆ, ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಸಚಿವ ನಾಗಿ ಸೇರಿ ಜನಸೇವೆ ಮಾಡುವ ಅವಕಾಶ ತಮಗೆ ಅನಿರೀಕ್ಷಿತವಾಗಿ ಲಭಿಸಿದ್ದು, ಪಕ್ಷದ ಹಿರಿಯರು ತಮ್ಮ ಮೇಲೆ ವಿಶ್ವಾಸವಿಟ್ಟು ನೀಡಲಾದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಅವರು ಹೇಳಿದರು.

ಮುಂಬರುವ ದಿನಗಳಲ್ಲಿ ಖಾನಾಪುರ ತಾಲ್ಲೂಕಿನ ನಿರುದ್ಯೋಗಿಗಳಿಗೆ ಸ್ಥಳೀಯವಾಗಿ ಉದ್ಯೋಗಾವಕಾಶ ದೊರೆಯುವಂತೆ ಕೇಂದ್ರದ ಯೋಜನೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ತಾವು ಅಗತ್ಯ ಯೋಜನೆ ರೂಪಿಸುವುದಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಪ್ರಹ್ಲಾದ ರೇಮಾಣಿ ಮತ್ತಿತರರು ಐದು ಅವಧಿಯಲ್ಲಿ ಸಂಸದರಾಗಿ ಲೋಕಸಭೆಗೆ ಆಯ್ಕೆಗೊಂಡು ಉತ್ತಮ ವಾಗ್ಮಿ ಎಂಬ ಖ್ಯಾತಿಗಳಿಸಿದ ನೂತನ ಸಚಿವ ಹೆಗಡೆ ಅವರ ಕಾರ್ಯ ವೈಖರಿ ಯನ್ನು ಶ್ಲಾಘಿಸಿ ಅಭಿನಂದಿಸಿದರು.

ಪಕ್ಷದ ಬ್ಲಾಕ್ ಅಧ್ಯಕ್ಷ ವಿಠ್ಠಲ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಮುಖಂಡರಾದ ವಿಠ್ಠಲ ಹಲಗೇಕರ, ವಲ್ಲಭ ಗುಣಾಜಿ, ಪ್ರಮೋದ ಕೊಚೇರಿ, ಸಂಜಯ ಕುಬಲ, ಬಾಬುರಾವ್ ದೇಸಾಯಿ ಸೇರಿದಂತೆ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT