ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಮಾನದಿಗೆ 1.43 ಲಕ್ಷ ಕ್ಯೂಸೆಕ್‌ ನೀರು

Last Updated 18 ಸೆಪ್ಟೆಂಬರ್ 2017, 7:22 IST
ಅಕ್ಷರ ಗಾತ್ರ

ಅಫಜಲಪುರ: ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾನದಿಗೆ 1.43 ಲಕ್ಷ ಕ್ಯೂಸೆಕ್‌ ನೀರು ಬಿಡಲಾಗಿದ್ದು, ಅದೇ ನೀರನ್ನು ಅಫಜಲಪುರದ ಸೊನ್ನ ಭೀಮಾ ಜಲಾಶಯದಿಂದ 17 ಗೇಟ್‌ಗಳ ಮುಖಾಂತರ ಭೀಮಾನದಿಗೆ ಬಿಡಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಫಜಲಪುರ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಲಕ್ಷ್ಮೀಕಾಂತ ಅಗ್ನಿಹೋತ್ರಿ ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಎಸ್‌.ಐನಾಪೂರ ತಿಳಿಸಿದರು.

ಈ ಕುರಿತು ಭಾನುವಾರ ಮಾಹಿತಿ ನೀಡಿದ ಅವರು, ಭೀಮಾ ಬ್ಯಾರೇಜ್‌ನಲ್ಲಿ ಸದ್ಯ 405.8 ಮೀ ನೀರು ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯಾಗಿದ್ದರಿಂದ ಉಜನಿ ಜಲಾಶಯದಿಂದ 1.43 ಲಕ್ಷ ಕ್ಯೂಸೆಕ್‌ ನೀರು ಭೀಮಾ ನದಿಗೆ ಬಿಡಲಾಗಿದೆ ಎಂದು ಅವರು ತಿಳಿಸಿದರು.

ಇನ್ನೊಂದು ಕಡೆ ವಿದ್ಯುತ್‌ ಉತ್ಪಾದನೆ ಘಟಕದಿಂದಲೂ ನೀರು ಭೀಮಾನದಿಗೆ ಬಿಡಲಾಗುತ್ತಿದೆ. ಅದಕ್ಕಾಗಿ ರೈತರು ಭೀಮಾನದಿ ದಡಕ್ಕೆ ಹೋಗಕೂಡದು ಮತ್ತು ಜಾನುವಾರುಗಳನ್ನು ಬಿಡಕೂಡದು. ಇನ್ನೂ ನೀರಿನ ಹರಿಯುವಿಕೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಸಂಚಾರ ಸ್ಥಗಿತ: ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದ ಹತ್ತಿರ ಭೀಮಾನದಿಗೆ ಅಡ್ಡಲಾಗಿ ನಿರ್ಮಸಿರುವ ಸೇತುವೆ ಮೇಲೆ ನೀರು ಬಂದಿರುವದರಿಂದ ಘತ್ತರಗಿಯಿಂದ ಜೇವರ್ಗಿ ಮತ್ತು ಸಿಂದಗಿ ತಾಲ್ಲೂಕಿನ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT