ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಬಿದ ಕೆರೆ: ಗ್ರಾಮಸ್ಥರಿಂದ ಪೂಜೆ

Last Updated 18 ಸೆಪ್ಟೆಂಬರ್ 2017, 8:38 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ತಾಲ್ಲೂಕಿನ ಚಿಕ್ಕೋನಹಳ್ಳಿಯ ಕೆರೆಯು ಭರ್ತಿಯಾದ ಕಾರಣ ಭಾನುವಾರ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣೇಗೌಡ ಸೇರಿ ಕೆರೆಗೆ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಿದರು.

ಕಳೆದ ಮೂರು ವರ್ಷಗಳಿಂದ ನೀರಿಲ್ಲದೇ ಬರಡಾಗಿದ್ದ ಚಿಕ್ಕೋನಹಳ್ಳಿ ಗ್ರಾಮದ ಕೆರೆಯು ನೂರಾರು ಎಕರೆ ಕೃಷಿಭೂಮಿಗೆ ನೀರೊದಗಿಸುತ್ತದೆ. ಇದು ಅಂತರ್ಜಲದ ಮರುಪೂರಣಕ್ಕೆ ವರದಾನವಾಗಿತ್ತು. ಆದರೆ ಬರಗಾಲದಿಂದಾಗಿ ಕೆರೆಯೇ ತುಂಬಿರಲಿಲ್ಲ.

ಈ ಬಾರಿ ಗೊರೂರು ಹೇಮಾವತಿ ಜಲಾಶಯದಿಂದ ನೀರು ತುಂಬಿಸುವ ಪ್ರಯತ್ನ ನಡೆಯಿತು. ಹೀಗಾಗಿ ಕೆರೆ ತುಂಬಿದ್ದು ಜನರು ಸಿಹಿ ಹಂಚಿ ಸಂಭ್ರಮಪಟ್ಟರು.
ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾದ ರಾಮದಾಸ್, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT