ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕರ್ಮರ ಅಭಿವೃದ್ಧಿಗೆ ₹ 25 ಕೋಟಿ ಅನುದಾನ

Last Updated 18 ಸೆಪ್ಟೆಂಬರ್ 2017, 9:07 IST
ಅಕ್ಷರ ಗಾತ್ರ

ಗೌರಿಬಿದನೂರು: ರಾಜ್ಯದಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ವಿಶ್ವ ಕರ್ಮ ಸಮುದಾಯದ ಅಭಿವೃದ್ಧಿಗಾಗಿ ಪ್ರಸಕ್ತ ಬಜೆಟ್ ನಲ್ಲಿ ₹ 25 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ವಿಧಾನಸಭಾ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು.

ಪಟ್ಟಣದ ಡಾ.ಎಚ್.ಎನ್.ಕಲಾಭವ ನದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಭಾನುವಾರ ಏರ್ಪಡಿಸಲಾಗಿದ್ದ ವಿಶ್ವಕರ್ಮ ಜಯಂತ್ಯುತ್ಸವದಲ್ಲಿ ಮಾತನಾಡಿದರು. ಸೃಷ್ಟಿಕರ್ತನಾದ ವಿಶ್ವಕರ್ಮನಿಗೆ ಅನೇಕ ಗುಡಿ ಗೋಪುರ ನಿರ್ಮಿಸಿದ ಕೀರ್ತಿ ಸಲ್ಲುತ್ತದೆ. ಪುರಿಯ ಜಗನ್ನಾಥ ವಿಗ್ರಹವು ವಿಶ್ವಕರ್ಮರೇ ನಿರ್ಮಿಸಿದರು ಎಂಬ ಪ್ರತೀತಿ ಇದೆ. ಜಕಣಚಾರಿ ಮತ್ತು ಡಕಣಚಾರಿ ಶಿಲ್ಪ ಕಲೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದು ಹೇಳಿದರು.

ವಿಶ್ವ ಕರ್ಮ ಜನಾಂಗ ಇಂದಿಗೂ ಪಂಚ ಕಸಬುಗಳಾದ ಚಿನ್ನ ಬೆಳ್ಳಿ, ಶಿಲ್ಪಕಲೆ, ಕೃಷಿಗೆ ಬೇಕಾದ ಸಲಕರಣೆ ತಯಾರಿಸುವ ಮೂಲಕ ಜೀವನ ಸಾಗಿಸುತ್ತಿದೆ. ತಾಲ್ಲೂಕಿನಲ್ಲಿ ವಿಶ್ವರ್ಮ ಸಮುದಾಯದ ಭವನಕ್ಕೆ ಪುರಸಭೆ ವತಿಯಿಂದ ನಿವೇಶನ ನೀಡು ವುದರ ಜೊತೆಗೆ ಕಟ್ಟಡದ ನಿರ್ಮಾಣಕ್ಕೆ ಮೊದಲ ಕಂತಿನಲ್ಲಿ ₹ 5 ಲಕ್ಷ ಶಾಸಕರ ನಿಧಿಯಿಂದ ನೀಡಲಾಗುವುದು ಎಂದು ಭರವಸೆ ನೀಡಿದರು.

ವಿಶ್ವಕರ್ಮ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ರಾಧಾಕೃಷ್ಣ ಮಾತನಾಡಿ, ‘ವಿಶ್ವಕರ್ಮ ಸಮುದಾಯ ಕೆ.ಪಿ ನಂಜುಂಡಿ ನೇತೃತ್ವದಲ್ಲಿ 20 ವರ್ಷಗಳಿಂದ ಹೋರಾಟ ನಡೆಸಿದ ಫಲವಾಗಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಯಿತು. ವಿಶ್ವಕರ್ಮ ಸಮುದಾಯದ ಜನಸಂಖ್ಯೆ 45 ಲಕ್ಷ ಇದ್ದರೂ ರಾಜಕೀಯವಾಗಿ ಪ್ರಾತಿನಿಧ್ಯ ದೊರೆಯುತ್ತಿಲ್ಲ. ಜನಾಂಗವು 2ಎ ಗುಂಪಿನಲ್ಲಿ ಇರುವುದರಿಂದ ಅವಕಾಶಗಳಿಂದ ವಂಚಿತವಾಗಿದೆ. ಆದ್ದರಿಂದ ಒಳಮೀಸಲಾತಿ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಶ್ವ ಕರ್ಮ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.

ತಹಶೀಲ್ದಾರ್ ಎಂ.ನಾಗರಾಜ್, ಪುರಸಭೆ ಅಧ್ಯಕ್ಷ ಕಲೀಉಲ್ಲಾ, ಇಒ ಡಾ. ನಾರಾಯಣಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ, ಕ್ಷೇತ್ರ ಶಿಕ್ಷಣಾಧಿಖಾರಿ ರವಿ ಕುಮಾರ್, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಆದಿನಾರಾಯಣಪ್ಪ, ಸಮುದಾಯದ ಮುಖಂಡರಾದ ಸಂತೋಷ್ ಪತ್ತಾರ್, ಪ್ರಮೀಳಾ ರಾಧಾಕೃಷ್ಣ, ರಾಜಶೇಖರ್, ರಂಗಾಚಾರಿ, ಚನ್ನರಾಯಚಾರಿ, ಶಿವಕುಮಾರ್, ಆಕಾಶ್ ದೀಪ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT