ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯದೇವ ಹೃದ್ರೋಗ ಸಂಸ್ಥೆಯಿಂದ 200 ಹೃದ್ರೋಗಿಗಳಿಗೆ ಉಚಿತ ಸ್ಟೆಂಟ್‌ ಅಳವಡಿಕೆ

Last Updated 18 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು 200 ಬಡ ಹೃದ್ರೋಗಿಗಳಿಗೆ ಉಚಿತವಾಗಿ ಉನ್ನತ ಮಟ್ಟದ ಮೆಡಿಕೇಟೆಡ್‌ ಸ್ಟೆಂಟ್‌ ಅಳವಡಿಸಲು ವಿಶೇಷ ಕಾರ್ಯಾಗಾರ ಹಮ್ಮಿಕೊಂಡಿದೆ.

‘ಸ್ಟೆಂಟ್‌ ಅಳವಡಿಕೆ ಸಲುವಾಗಿ ನಗರದ ಜಯದೇವ ಆಸ್ಪತ್ರೆಯಲ್ಲಿ ಅಕ್ಟೋಬರ್‌ 10 ಹಾಗೂ 11ರಂದು ಹಾಗೂ ಮೈಸೂರಿನ ಜಯದೇವ ಶಾಖೆಯಲ್ಲಿ ಅ. 12 ಹಾಗೂ 13ರಂದು ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಈಗಾಗಲೇ ಆಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಉಚಿತ ಸ್ಟೆಂಟ್‌ ಅಳವಡಿಸಿಕೊಳ್ಳಬಹುದು. ಬಡ ರೋಗಿಗಳು ಹಾಗೂ ಬಡತನರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರು ಈ ಸೌಲಭ್ಯಪಡೆಯಬಹುದು. ದಾಖಲಾತಿ ಸಂದರ್ಭದಲ್ಲಿ ರೋಗಿಗಳು ಬಿಪಿಎಲ್‌ ಪಡಿತರ ಚೀಟಿ ಅಥವಾ ಆದಾಯ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು’ ಎಂದು ಸಂಸ್ಥೆಯನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದ್ದಾರೆ.

‘ಅಮೆರಿಕದ ಮೆಡ್‌ಟ್ರಾನಿಕ್ಸ್‌ ಹಾಗೂ ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್‌ ಫೌಂಡೇಷನ್‌ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸೌಲಭ್ಯ ಪಡೆಯಲು ಅಕ್ಟೋಬರ್‌ 8ರ ಒಳಗಾಗಿ ಹೆಸರು ನೋಂದಾಯಿಸಬೇಕು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ: ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್‌, ಬೆಂಗಳೂರು– 560069

ದೂರವಾಣಿ: 080 22977433

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT