ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಲ್ಸ್‌ಗೆ ಕಠಿಣ ಸವಾಲು

Last Updated 18 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ರಾಂಚಿ: ಪ್ರೊ ಕಬಡ್ಡಿ ಲೀಗ್‌ ಐದನೇ ಆವೃತ್ತಿಯಲ್ಲಿ ಏಳು ಬೀಳಿನ ಹಾದಿ ಸವೆಸಿರುವ ಬೆಂಗಳೂರು ಬುಲ್ಸ್‌ ತಂಡದವರು ಈಗ ಮತ್ತೊಂದು ಸವಾಲಿಗೆ ಸಜ್ಜಾಗಿದ್ದಾರೆ.

ಮಂಗಳವಾರ ನಡೆಯುವ ಪಂದ್ಯದಲ್ಲಿ ರೋಹಿತ್‌ ಕುಮಾರ್‌ ಬಳಗ ಎರಡು ಬಾರಿಯ ಚಾಂಪಿಯನ್‌ ಪಟ್ನಾ ಪೈರೇಟ್ಸ್‌ ತಂಡದ ವಿರುದ್ಧ ಸೆಣಸಲಿದ್ದು ಜಯದ ಮಂತ್ರ ಜಪಿಸುತ್ತಿದೆ.

ಬುಲ್ಸ್‌ ತಂಡ ಈ ಬಾರಿಯ ಲೀಗ್‌ನಲ್ಲಿ 14 ಪಂದ್ಯಗಳನ್ನು ಆಡಿದೆ. ಈ ಪೈಕಿ ನಾಲ್ಕರಲ್ಲಿ ಗೆದ್ದಿದ್ದು, ಎಂಟು ಪಂದ್ಯಗಳಲ್ಲಿ ಸೋತಿದೆ. ಸೆಪ್ಟೆಂಬರ್‌ 10 ರಂದು ನಡೆದಿದ್ದ ಪಂದ್ಯದಲ್ಲಿ ಪುಣೇರಿ ಪಲ್ಟನ್‌ ತಂಡದ ಸವಾಲು ಮೀರಿ ನಿಂತಿದ್ದ ತಂಡ ನಂತರ ತೆಲುಗು ಟೈಟನ್ಸ್‌ ಎದುರು ‘ಟೈ’ ಮಾಡಿಕೊಂಡಿತ್ತು.

ರೋಹಿತ್‌ ಪಡೆಯ ನಾಕೌಟ್‌ ಕನಸು ಉಳಿಯಬೇಕಾದರೆ ಮುಂದಿನ ಎಲ್ಲಾ ಪಂದ್ಯಗಳಲ್ಲೂ ಗೆಲುವು ಅನಿವಾರ್ಯ.

ಇಂದಿನ ಪಂದ್ಯಗಳು
ಪುಣೇರಿ ಪಲ್ಟನ್‌–ಹರಿಯಾಣ ಸ್ಟೀಲರ್ಸ್‌, ಆರಂಭ: ರಾತ್ರಿ 8ಕ್ಕೆ.
ಬೆಂಗಳೂರು ಬುಲ್ಸ್‌–ಪಟ್ನಾ ಪೈರೇಟ್ಸ್‌
ಆರಂಭ: ರಾತ್ರಿ 9ಕ್ಕೆ.
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT