ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಚರಿ ಸಂಸ್ಥೆ: ಪರಿಶೀಲನೆಗೆ ಸೂಚನೆ

Last Updated 18 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನೀತಿಯಡಿ ಆರ್ಚರಿ ಸಂಸ್ಥೆಯು (ಎಎಐ) ತನ್ನ ನಿಯಮಾವಳಿಗಳಿಗೆ ತಿದ್ದುಪಡಿ ತಂದಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೋಮವಾರ ಸೂಚಿಸಿದೆ.

ಸಂಸ್ಥೆಯ ಕಾರ್ಯಯೋಜನೆಗಳ ಮೇಲೆ ಕಣ್ಣಿಡು ವಂತೆ ದೆಹಲಿ ಹೈಕೋರ್ಟ್‌ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌.ವೈ.ಖುರೇಷಿ ಅವರನ್ನು ಕಳೆದ ಆಗಸ್ಟ್‌ ನಲ್ಲಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಎಎಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಈ ಸೂಚನೆ ನೀಡಿದೆ. ಸಂಸ್ಥೆಯ ಮಾನ್ಯತೆಯನ್ನು 2012ರಲ್ಲಿ ಸರ್ಕಾರ ನವೀಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT