ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಯರ್‌ ಚುನಾವಣೆ ಸಿದ್ಧತೆ ಚರ್ಚೆ

Last Updated 18 ಸೆಪ್ಟೆಂಬರ್ 2017, 19:43 IST
ಅಕ್ಷರ ಗಾತ್ರ

ಬೆಂಗಳೂರು: ಮೇಯರ್ ಮತ್ತು ಉಪಮೇಯರ್ ಚುನಾವಣೆಯ ಸಿದ್ಧತೆಗಳ ಕುರಿತು ಪ್ರಾದೇಶಿಕ ಆಯುಕ್ತೆ ವಿ.ಜಯಂತಿ ಅವರು ಬಿಬಿಎಂಪಿ ಚುನಾವಣಾ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು.

ಇದೇ 28ರಂದು ಬೆಳಿಗ್ಗೆ 11.30ಕ್ಕೆ ಚುನಾವಣೆ ನಡೆಯಲಿದೆ. ಮತದಾರರ ಪಟ್ಟಿ ಹಾಗೂ ಚುನಾವಣೆ ನಡೆಸುವ ವಿಧಾನ, ಸಿಬ್ಬಂದಿಗಳ ನಿಯೋಜನೆ, ಭದ್ರತೆ ಕುರಿತು ಪ್ರಾದೇಶಿಕ ಆಯುಕ್ತರು ಮಾಹಿತಿ ಪಡೆದುಕೊಂಡರು.

‘ಚುನಾವಣೆ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ನಗರ ಜಿಲ್ಲಾಧಿಕಾರಿ ವಿ.ಶಂಕರ್, ಬಿಬಿಎಂಪಿ ಹೆಚ್ಚುವರಿ ಆಯುಕ್ತೆ (ಆ‌ಡಳಿತ) ಸಾವಿತ್ರಿ ಹಾಗೂ ಚುನಾವಣೆಗೆ ನಿಯೋಜನೆಗೊಂಡಿರುವ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT