ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದುರಸ್ತಿಗೆ ಮುಂದಾದ ಅಧಿಕಾರಿಗಳು

Last Updated 19 ಸೆಪ್ಟೆಂಬರ್ 2017, 7:15 IST
ಅಕ್ಷರ ಗಾತ್ರ

ಮಾಲೂರು: ತಾಲ್ಲೂಕಿನಲ್ಲಿ ಕಾಡದೇನಹಳ್ಳಿ ಗ್ರಾಮದ ರಸ್ತೆಯನ್ನು ದುರಸ್ತಿ ಮಾಡಲು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಪಟ್ಟಣದ ದೊಡ್ಡಕೆರೆ ಕಟ್ಟೆಯ ಪಕ್ಕದಲ್ಲಿ ಹಾದು ಹೋಗುವ ಈ ರಸ್ತೆಯು ಮಳೆಯಿಂದ ಗುಂಡಿ ಬಿದ್ದಿತ್ತು. ಇದರಿಂದ ವಾಹನ ಸಂಚಾರಕ್ಕೆ ಹಾಗೂ ಸುತ್ತಮುತ್ತಲ ಗ್ರಾಮಗಳ ಜನರ ಓಡಾಟಕ್ಕೆ ಸಮಸ್ಯೆಯಾಗಿತ್ತು. ಈ ನಡುವೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಇದೇ ರಸ್ತೆಯಲ್ಲಿ ಪೈಪ್‌ಲೈನ್‌ ಕಾಮಗಾರಿ ನಡೆಸಿತ್ತು.

ಮಂಡಳಿಯು ಕಾಡದೇನಹಳ್ಳಿ– ಮಾಲೂರು ಸಂಪರ್ಕ ರಸ್ತೆ ಪಕ್ಕದಲ್ಲಿ ಕೊಳಚೆ ನೀರು ಸಂಸ್ಕರಣ ಘಟಕ ನಿರ್ಮಿಸಿದೆ. ಪಟ್ಟಣದಿಂದ ಈ ಘಟಕಕ್ಕೆ ಪೈಪ್‌ಲೈನ್‌ ಮೂಲಕ ಕೊಳಚೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಪೈಪ್‌ಲೈನ್‌ ಕಾಮಗಾರಿಗಾಗಿ ರಸ್ತೆಯನ್ನು ಅಗೆದಿದ್ದರಿಂದ ಸುತ್ತಮುತ್ತಲಿನ 10 ಹಳ್ಳಿಗಳ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು. ಈ ಸಂಬಂಧ ‘ಪ್ರಜಾವಾಣಿ’ಯು ಇತ್ತೀಚೆಗೆ ವರದಿ ಪ್ರಕಟಿಸಿತ್ತು.

ಪತ್ರಿಕೆಯಲ್ಲಿನ ವರದಿ ನೋಡಿ ಎಚ್ಚೆತ್ತುಕೊಂಡ ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಎಂಜಿನಿಯರ್‌ ಅಮರಪ್ಪ ಮತ್ತು ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಚಿನ್ನಸ್ವಾಮಿಗೌಡ ಅವರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯ ಅವ್ಯವಸ್ಥೆ ಪರಿಶೀಲಿಸಿದರು.

‘ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆ ಹಾಳಾಗಿದೆ. ಅಲ್ಲದೇ, ತಾಲ್ಲೂಕಿನಾದ್ಯಂತ ಇತ್ತೀಚೆಗೆ ಮಳೆಯಾದ ಕಾರಣ ರಸ್ತೆ ಗುಂಡಿ ಬಿದ್ದಿದೆ. ಸಾರ್ವಜನಿಕರ ಸಮಸ್ಯೆ ಮನವರಿಕೆಯಾಗಿದೆ. ಶೀಘ್ರವೇ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸುತ್ತೇವೆ’ ಎಂದು ಅಮರಪ್ಪ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT