ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜ್ವಲ– ಮಹಿಳೆಯರಿಗೆ ವರದಾನ: ಶೋಭಾ

Last Updated 19 ಸೆಪ್ಟೆಂಬರ್ 2017, 9:00 IST
ಅಕ್ಷರ ಗಾತ್ರ

ಚೇರ್ಕಾಡಿ(ಬ್ರಹ್ಮಾವರ) : ‘ಭಾರತ ದೇಶದ ಪ್ರತಿ ಮನೆಯನ್ನು ಹೊಗೆ ಮುಕ್ತ ಮನೆಯನ್ನಾಗಿ ಪರಿವರ್ತಿಸಿ ಮಹಿಳೆಯರ ಆರೋಗ್ಯ ಸುಧಾರಿಸುವ ಯೋಜನೆಯಾದ ಪ್ರಧಾನ ಮಂತ್ರಿ ಮೋದಿಯವರ ಮಹತ್ವಾಕಾಂಕ್ಷಿ ಉಜ್ವಲ ಉಚಿತ ಗ್ಯಾಸ್ ವಿತರಣೆ ಕಾರ್ಯಕ್ರಮದಿಂದ ದೇಶದ ಕೋಟ್ಯಂತರ ಮಹಿಳೆಯರು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ’ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಚೇರ್ಕಾಡಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಉಜ್ವಲ ಉಚಿತ ಗ್ಯಾಸ್ ವಿತರಣೆಯನ್ನು ಮಾಡಿ ಅವರು ಮಾತನಾಡಿದರು. ಮೋದಿಯವರ ನಾಯಕತ್ವದಲ್ಲಿ ವಿಶ್ವವೇ ಭಾರತವನ್ನು ಗುರುತಿಸುವಂತೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪಿ.ರಾವ್, ಉದಯ್ ಕುಮಾರ್ ಫ್ಯಾಮಿಲಿ ಟ್ರಸ್ಟ್ ನ ಉದಯ್ ಕುಮಾರ್ ಶೆಟ್ಟಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯೋಗಿತಾ ಬಿ, ಕಾರ್ಯದರ್ಶಿ ಅಂಬುಜಾ ಪಾಲ್ಕೆ, ಶ್ಯಾಮಲ ಕುಂದರ್, ಶಾಲಾ ಮುಖ್ಯೋಪಾಧ್ಯಾಯ ಪ್ರಕಾಶ್ ಬಿ.ಬಿ, ಆನಂದ ಶೆಟ್ಟಿ, ಎ.ಪಿ.ಎಂ.ಸಿ ಸದಸ್ಯ ಶ್ಯಾಮ ಪ್ರಸಾದ ಭಟ್ ಉಪಸ್ಥಿತರಿದ್ದರು.

65 ಮಂದಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ ಮಾಡಿದರು. ಪಂಚಾಯಿತಿ ಸದಸ್ಯರಾದ ನಾರಾಯಣ ನಾಯ್ಕ ಸ್ವಾಗತಿಸಿದರು. ಕಮಲಾಕ್ಷ ಹೆಬ್ಬಾರ್ ನಿರೂಪಿಸಿದರು. ಕಿಟ್ಟಪ್ಪ ಅಮೀನ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT