ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇವಾಂಕ ಟ್ರಂಪ್‌ ಜತೆ ಸುಷ್ಮಾ ಮಾತುಕತೆ

Last Updated 19 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಪುತ್ರಿ ಮತ್ತು ಸರ್ಕಾರದ ಸಲಹೆಗಾರ್ತಿ ಇವಾಂಕ ಟ್ರಂಪ್‌ ಅವರು ಸೋಮವಾರ ವಿದೇಶಾಂಗ ವ್ಯವಹಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್‌ ಅವರನ್ನು ಭೇಟಿ ಮಾಡಿದರು. ಉಭಯ ರಾಷ್ಟ್ರಗಳ ಮಹಿಳಾ ಉದ್ಯಮಶೀಲತೆ ಅಭಿವೃದ್ಧಿಪಡಿಸುವ ಬಗ್ಗೆ ಅವರು ಚರ್ಚೆ ನಡೆಸಿದರು.

ವಿಶ್ವಸಂಸ್ಥೆಯ ವಾರ್ಷಿಕ ಮಹಾ ಅಧಿವೇಶನಕ್ಕಾಗಿ ಇಲ್ಲಿಗೆ ಬಂದಿರುವ ಸುಷ್ಮಾ ಅವರು ವಿವಿಧ ರಾಷ್ಟ್ರಗಳ ಪ್ರತಿನಿಧಿಗಳನ್ನೂ ಭೇಟಿಯಾದರು. ಮುಂದಿನ ನವೆಂಬರ್‌ನಲ್ಲಿ ಭಾರತದಲ್ಲಿ  ನಡೆಯಲಿರುವ ಜಾಗತಿಕ ಉದ್ಯಮಶೀಲತಾ ಶೃಂಗಸಭೆಯಲ್ಲಿ ಇವಾಂಕ ಅವರು ಅಮೆರಿಕದ ನಿಯೋಗದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.

‘ಮಹಿಳೆಯರ ಉದ್ಯಮಶೀಲತೆ ಮತ್ತು ಕೌಶಲ ಅಭಿವೃದ್ಧಿ ಅಭಿವೃದ್ಧಿ ಕುರಿತು ನಾವು ಸಾಕಷ್ಟು ಚರ್ಚೆ ನಡೆಸಿದ್ದೇವೆ’ ಎಂದು ಇವಾಂಕ ಟ್ವೀಟ್‌ ಮಾಡಿದ್ದಾರೆ.

ಹಸೀನಾ ಭೇಟಿ

ಸುಷ್ಮಾ ಸ್ವರಾಜ್‌ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರನ್ನೂ ಭೇಟಿಯಾಗಿ ಮಾತನಾಡಿದರು. ಆದರೆ ಈ ಮಾತುಕತೆಯಲ್ಲಿ ರೊಹಿಂಗ್ಯಾ ಬಿಕ್ಕಟ್ಟಿನ ವಿಷಯ ಚರ್ಚೆಗೆ ಬರಲಿಲ್ಲ. ಇದೊಂದು ಅನೌಪಚಾರಿಕ ಮಾತುಕತೆಯಷ್ಟೇ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT