ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರಿಯಾ ನಾಶ ಮಾಡುತ್ತೇವೆ: ಟ್ರಂಪ್ ಎಚ್ಚರಿಕೆ

ಪರಮಾಣು ಕಾರ್ಯಕ್ರಮ ನಿಲ್ಲಸದಿದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆ
Last Updated 19 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಉತ್ತರ ಕೊರಿಯಾವು ತನ್ನ ಪರಮಾಣು ಕಾರ್ಯಕ್ರಮಗಳಿಂದ ಹಿಂದೆ ಸರಿಯದಿದ್ದಲ್ಲಿ, ಅದನ್ನು ಸಂಪೂರ್ಣ ನಾಶ ಮಾಡಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ಎಚ್ಚರಿಕೆ ರವಾನಿಸಿದ್ದಾರೆ.

ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಮಂಗಳವಾರ ತಮ್ಮ ಚೊಚ್ಚಲ ಭಾಷಣದಲ್ಲಿ, ‘ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರು ಆತ್ಮಹತ್ಯಾ ಯೋಜನೆಯ ರಾಕೆಟ್ ಮ್ಯಾನ್’ ಎಂದು ಟ್ರಂಪ್ ಅವರು ವ್ಯಂಗ್ಯವಾಡಿದರು.

ಉತ್ತರ ಕೊರಿಯಾವು ತನ್ನ ನಡವಳಿಕೆಯನ್ನು ಬದಲಿಸಿಕೊಳ್ಳುವವರೆಗೆ ಕಿಮ್ ಸರ್ಕಾರವನ್ನು ಏಕಾಂಗಿಯನ್ನಾಗಿ ಮಾಡಬೇಕು ಎಂದು ಸದಸ್ಯ ರಾಷ್ಟ್ರಗಳಿಗೆ ಅವರು ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT