ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂಲನ್‌ ಗೋಸ್ವಾಮಿ ಜೀವನಾಧಾರಿತ ಚಲನಚಿತ್ರಕ್ಕೆ ಸಿದ್ಧತೆ

Last Updated 19 ಸೆಪ್ಟೆಂಬರ್ 2017, 20:25 IST
ಅಕ್ಷರ ಗಾತ್ರ

ಕೋಲ್ಕತ್ತ: ಭಾರತ ಮಹಿಳಾ ಕ್ರಿಕೆಟ್‌ ತಂಡದ ವೇಗಿ ಜೂಲನ್‌ ಗೋಸ್ವಾಮಿ ಅವರ ಜೀವನಾಧಾರಿತ ಚಲನಚಿತ್ರ ಸದ್ಯದಲ್ಲೇ ಸೆಟ್ಟೇರಲಿದೆ.

ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ’ಚಕ್‌ದಹ ಎಕ್ಸ್‌ಪ್ರೆಸ್‌’ ಎಂದು ಹೆಸರಿಡಲಾಗಿದ್ದು, ಸುಶಾಂತ್‌ ದಾಸ್‌ ಇದನ್ನು ನಿರ್ದೇಶಿಸಲಿದ್ದಾರೆ.

ಜೂಲನ್‌ ಅವರು ಏಕದಿನ ಮಾದರಿ ಯಲ್ಲಿ ಗರಿಷ್ಠ ವಿಕೆಟ್‌ ಉರುಳಿಸಿದ ವಿಶ್ವದ ಮೊದಲ ಆಟಗಾರ್ತಿ ಎಂಬ ಹಿರಿಮೆ ಹೊಂದಿದ್ದಾರೆ.

‘ಸದ್ಯ ಚಿತ್ರಕತೆ ಸಿದ್ಧಪಡಿಸುತ್ತಿದ್ದು ಮುಂದಿನ ವರ್ಷದ ಏಪ್ರಿಲ್‌ನಲ್ಲಿ ಚಿತ್ರೀಕರಣ ಶುರು ಮಾಡಲಿದ್ದೇವೆ. ಜೂಲನ್‌ ಅವರ ಹುಟ್ಟೂರು, ನಾಡಿಯ ಮತ್ತು ಭಾರತ ತಂಡ ವಿಶ್ವಕಪ್‌ ಫೈನಲ್ ಆಡಿದ್ದ ಲಾರ್ಡ್ಸ್‌ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಣ ನಡೆಸುತ್ತೇವೆ’ ಎಂದು ಸುಶಾಂತ್‌ ಹೇಳಿದ್ದಾರೆ.

ಜೂಲನ್‌ ಅವರ ಪಾತ್ರದಲ್ಲಿ ಯಾರು ನಟಿಸುತ್ತಾರೆ ಎಂಬುದು ಇನ್ನೂ ಅಂತಿಮವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT