ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಕಾ ಕ್ರಿಕೆಟ್‌ಗೆ ಹೊಸ ಆಯ್ಕೆ ಸಮಿತಿ

Last Updated 19 ಸೆಪ್ಟೆಂಬರ್ 2017, 20:27 IST
ಅಕ್ಷರ ಗಾತ್ರ

ಕೊಲಂಬೊ: ಪಾಕಿಸ್ತಾನ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ಗೆ ಶ್ರೀಲಂಕಾ ತಂಡವನ್ನು ಆಯ್ಕೆ ಮಾಡಲು ಹಿರಿಯ ಕ್ರಿಕೆಟಿಗ ಗ್ರೇಮ್ ಲಾಬ್ರೂಯ್‌ ಅವರ ನೇತೃತ್ವದಲ್ಲಿ ಹೊಸ ಸಮಿತಿಯನ್ನು ನೇಮಕ ಮಾಡಲಾಗಿದೆ.

ಭಾರತ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 3–0 ಅಂತರದಿಂದ ಸೋತ ನಂತರ ಸನತ್ ಜಯಸೂರ್ಯ ನೇತೃತ್ವದ ಆಯ್ಕೆ ಸಮಿತಿ ರಾಜೀನಾಮೆ ನೀಡಿತ್ತು.

ಹೊಸ ಆಯ್ಕೆ ಸಮಿತಿಯಲ್ಲಿ ಗಾಮಿನಿ ವಿಕ್ರಮಸಿಂಘೆ, ಜೆರೆಲ್ ವಾಟರ್ಸ್‌, ಸಜಿತ್ ಫರ್ನಾಂಡೊ ಮತ್ತು ಅಸಂಕಾ ಗುರುಸಿನ್ಹ ಇದ್ದಾರೆ. ಪಾಕಿಸ್ತಾನ ವಿರುದ್ಧದ ಟೆಸ್ಟ್‌ ಸರಣಿ ಯುಎಇಯಲ್ಲಿ ಸೆಪ್ಟೆಂಬರ್‌ 28ರಂದು ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT