ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ ಉತ್ಸವಕ್ಕೆ ಸಿ.ಸಿ.ಟಿ.ವಿ ಕಣ್ಗಾವಲು

Last Updated 20 ಸೆಪ್ಟೆಂಬರ್ 2017, 6:53 IST
ಅಕ್ಷರ ಗಾತ್ರ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಸುಗಮವಾಗಿ ನಡೆಯಲು ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ನಗರದ ವಿವಿಧೆಡೆ ಹೆಚ್ಚುವರಿಯಾಗಿ 66 ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇದೇ 21ರಿಂದ 30ರ ವರೆಗೆ ನಡೆಯಲಿರುವ ದಸರಾ ಮಹೋತ್ಸವದಲ್ಲಿ ನಗರದ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಎ.ಸುಬ್ರಮಣ್ಯೇಶ್ವರರಾವ್‌ ತಿಳಿಸಿದರು.

ಅರಮನೆ, ಬನ್ನಿಮಂಟಪ, ಮೆರವಣಿಗೆ ಸಾಗುವ ಮಾರ್ಗಗಳು ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅತ್ಯಾಧುನಿಕ ಕ್ಯಾಮೆರಾಗಳು ದಿನದ 24 ಗಂಟೆಗಳ ಕಾಲವೂ ದೃಶ್ಯಗಳನ್ನು ಸೆರೆ ಹಿಡಿಯಲಿವೆ. ಯುವ ದಸರಾ, ಆಹಾರ ಮೇಳ ನಡೆಯುವ ತಾಣಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲು ಆಯಾ ಸಮಿತಿಗಳಿಗೆ ಸೂಚಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

5,056 ಸಿಬ್ಬಂದಿ ನಿಯೋಜನೆ: ಈ ಬಾರಿ ಒಟ್ಟು 5,056 ಸಿಬ್ಬಂದಿಯನ್ನು ನಿಯೋಜಿ ಸಲಾಗಿದ್ದು, ಮೊದಲ ಹಂತದ ಭದ್ರತೆಗೆ ಸುಮಾರು 3,500 ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತದೆ.

ಜಂಬೂಸವಾರಿಯ ದಿನ ಗಣ್ಯರು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಹರಿದುಬರಲಿರುವ ಕಾರಣ ಇನ್ನಷ್ಟು ಸಿಬ್ಬಂದಿಗಳ ನೆರವಿನಿಂದ ಹೆಚ್ಚಿನ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT