ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ತಂಡಕ್ಕೆ ಗೆಲುವು

Last Updated 20 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಕಠ್ಮಂಡು: ದಿಟ್ಟ ಆಟ ಆಡಿದ ಭಾರತ ತಂಡದವರು ಎಎಫ್‌ಸಿ 16ವರ್ಷದೊಳಗಿನವರ ಅರ್ಹತಾ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿದ್ದಾರೆ.

ಹಾಲ್‌ಚೌಕ್‌ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಭಾರತ ತಂಡ 3–0 ಗೋಲುಗಳಿಂದ ಪ್ಯಾಲೆಸ್ಟೀನ್‌ ತಂಡವನ್ನು ಸೋಲಿಸಿತು.

ಪಂದ್ಯದ ಶುರುವಿನಿಂದಲೇ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿದ್ದರಿಂದ ಮೊದಲರ್ಧ ಗೋಲು ರಹಿತವಾಗಿತ್ತು.

ಆದರೆ ದ್ವಿತೀಯಾರ್ಧದಲ್ಲಿ ವಿಕ್ರಂ ಪ್ರತಾಪ್‌ ಬಳಗ ಮಿಂಚಿತು. 51ನೇ ನಿಮಿಷದಲ್ಲಿ ಗಿವ್ಸನ್‌ ಸಿಂಗ್‌ ಖಾತೆ ತೆರೆದರು. ಅವರು ಫ್ರೀ ಕಿಕ್‌ ಮೂಲಕ ಚೆಂಡನ್ನು ಗುರಿ ಮುಟ್ಟಿಸಿದರು. ಆ ನಂತರದ 20 ನಿಮಿಷಗಳ ಅವಧಿಯಲ್ಲಿ ಯಾವ ತಂಡಕ್ಕೂ ಗೋಲು ಗಳಿಸಲು ಆಗಲಿಲ್ಲ. 72ನೇ ನಿಮಿಷದಲ್ಲಿ ಬೆಕೆ ಒರಾಮ್‌ ಗೋಲು ಬಾರಿಸಿ ಭಾರತದ ಮುನ್ನಡೆ ಹೆಚ್ಚಿಸಿದರು. ಆ ನಂತರ ತಂಡ ಇನ್ನಷ್ಟು ಆಕ್ರಮಣಕಾರಿಯಾಯಿತು.

79ನೇ ನಿಮಿಷದಲ್ಲಿ ನಾಯಕ ವಿಕ್ರಂ ಚೆಂಡನ್ನು ಗುರಿ ಸೇರಿಸಿ ಸಂಭ್ರಮಕ್ಕೆ ಕಾರಣರಾದರು. ಶುಕ್ರವಾರ ಮಧ್ಯಾಹ್ನ 3.30ಕ್ಕೆ ನಡೆಯುವ ತನ್ನ ಎರಡನೇ ಪಂದ್ಯದಲ್ಲಿ ಭಾರತ ತಂಡ ನೇಪಾಳ ವಿರುದ್ಧ ಸೆಣಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT