ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶ್ನೆ ಪತ್ರಿಕೆ ಸೋರಿಕೆ: ಸಿಬ್ಬಂದಿ ನೇಮಕ ಪರೀಕ್ಷೆ ರದ್ದು

Last Updated 20 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ದಾವಣಗೆರೆ ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಇದೇ 21, 22ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದರಿಂದ ರದ್ದುಪಡಿಸಲಾಗಿದೆ.

ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಹಾಗೂ ಸಹಾಯಕ ಪ್ರಾಧ್ಯಾಪಕರ 111  ಮತ್ತು ಬೋಧಕೇತರ ಏಳು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯಬೇಕಿತ್ತು. ಸುಮಾರು 900 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆಗಳು ಅಭ್ಯರ್ಥಿಗಳಿಗೆ ಲಭ್ಯವಾಗಿವೆ ಎಂಬ ದೂರುಗಳು ಬಂದಿದ್ದರಿಂದ ಉನ್ನತ ಶಿಕ್ಷಣ ಇಲಾಖೆ ಬುಧವಾರ ಪರೀಕ್ಷೆ ರದ್ದುಪಡಿಸಿತು.

ಪರೀಕ್ಷೆ ರದ್ದಾದ ಕುರಿತು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗೆ ಕುಲಪತಿ, ರಿಜಿಸ್ಟ್ರಾರ್‌ ಸಂಪರ್ಕಕ್ಕೆ ಸಿಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT