ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ಯಾರಿಸ್ ಒಪ್ಪಂದಕ್ಕೆ ಭಾರತ ಬದ್ಧ’: ಸಚಿವೆ ಸುಷ್ಮಾ

Last Updated 20 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಮಹತ್ವದ ಪ್ಯಾರಿಸ್ ಒಪ್ಪಂದಕ್ಕೆ ಬದ್ಧವಾಗಿರುವುದಾಗಿ ಭಾರತ ಬುಧವಾರ ಮತ್ತೊಮ್ಮೆ ಸ್ಪಷ್ಟಪಡಿಸಿತು. ಹಸಿರುಮನೆ ಅನಿಲ ತಗ್ಗಿಸುವ ಒಪ್ಪಂದದ ಪರವಾಗಿ ಕೆಲಸ ಮಾಡಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಪರಿಸರ ಹಾಗೂ ಅಭಿವೃದ್ಧಿ ಕುರಿತ ಚರ್ಚೆಯಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಸುಷ್ಮಾ ಹೇಳಿದರು. ಒಪ್ಪಂದದಿಂದ ಹಿಂದೆ ಸರಿಯುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಜೂನ್ ತಿಂಗಳಲ್ಲಿ ಘೋಷಿಸಿದ್ದ ಬಳಿಕ ಈ ಬಗ್ಗೆ ಅನಿಶ್ಚಿತತೆ ಮನೆ ಮಾಡಿತ್ತು. ಅಮೆರಿಕದ ಈ ನಿರ್ಧಾರವು ಭಾರತ, ಚೀನಾದಂತಹ ದೇಶಗಳಿಗೆ ಅನಪೇಕ್ಷಿತ ಪ್ರಯೋಜನ ಮಾಡಿಕೊಡಲಿದೆ ಎಂದು ಅವರು ಹೇಳಿದ್ದಾರೆ.

‘ಹವಾಮಾನ ವೈಪರೀತ್ಯವನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು, ಭೂಮಿ ಸಂರಕ್ಷಣೆ ಕುರಿತ ನಮ್ಮ ಜವಾಬ್ದಾರಿಯ ಅರಿವು ಇದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT