ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊನ್ನ ಭೀಮಾ ಜಲಾಶಯದಿಂದ 70 ಸಾವಿರ ಕ್ಯುಸೆಕ್‌ ನೀರು ಭೀಮಾನದಿಗೆ

Last Updated 21 ಸೆಪ್ಟೆಂಬರ್ 2017, 5:50 IST
ಅಕ್ಷರ ಗಾತ್ರ

ಅಫಜಲಪುರ: ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾನದಿಗೆ ಮತ್ತೆ 58 ಸಾವಿರ ಕ್ಯುಸೆಕ್‌ ನೀರು ಬಿಡಲಾಗಿದೆ. ಹಾಗಾಗಿ, ಅಫಜಲಪುರದ ಸೊನ್ನ ಭೀಮಾ ಜಲಾಶಯದಿಂದ 5ಗೇಟ್‌ಗಳ ಮುಖಾಂತರ ಭೀಮಾನದಿಗೆ ನೀರು ಬಿಡಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮ ಅಫಜಲಪುರ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಲಕ್ಷ್ಮೀಕಾಂತ ಅಗ್ನಿಹೋತ್ರಿ ತಿಳಿಸಿದರು.

ಈ ಕುರಿತು ಬುಧವಾರ ಮಾಹಿತಿ ನೀಡಿದ ಅವರು, ಭೀಮಾ ಬ್ಯಾರೇಜ್‌ನಲ್ಲಿ ಸದ್ಯಕ್ಕೆ 405.8 ಮೀ. ನೀರು ಸಂಗ್ರಹಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯಾಗಿದ್ದರಿಂದ ಉಜನಿ ಜಲಾಶಯದಿಂದ 70 ಸಾವಿರ ಕ್ಯುಸೆಕ್‌ ನೀರು ಭೀಮಾ ನದಿಗೆ ಬಿಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT