ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ಎಂ. ಕೃಷ್ಣ ಅಳಿಯ ಸಿದ್ಧಾರ್ಥ ಒಡೆತನದ ಕಾಫಿ ಡೇ ಕಚೇರಿಗಳ ಮೇಲೆ ಐಟಿ ದಾಳಿ

Last Updated 21 ಸೆಪ್ಟೆಂಬರ್ 2017, 6:28 IST
ಅಕ್ಷರ ಗಾತ್ರ

ಬೆಂಗಳೂರು: ಕಾಫಿ ಡೇ ಸಮೂಹದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅಳಿಯ ವಿ.ಜಿ. ಸಿದ್ಧಾರ್ಥ ಅವರ ಕಚೇರಿಗಳ ಮೇಲೆ ಗುರುವಾರ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚೆನ್ನೈ, ಮುಂಬೈ, ಚಿಕ್ಕಮಗಳೂರು ಸೇರಿ ವಿವಿಧ ವಲಯಗಳ 20ಕ್ಕೂ ಹೆಚ್ಚು ಕಾಫಿ ಡೇ ಸಂಬಂಧಿಸಿದ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

(ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಚಿಕ್ಕಮಗಳೂರಿನ ಮೂಡಿಗೆರೆ ರಸ್ತೆಯಲ್ಲಿನ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಘಟಕ) 

ಸಿದ್ಧಾರ್ಥ 1992ರಲ್ಲಿ ಅಮಾಲ್ಗಮೇಟೆಡ್‌ ಬೀನ್‌ ಹೆಸರಿನ ಕಂಪೆನಿ ಸ್ಥಾಪಿಸಿದ್ದರು. ಬಳಿಕ ಅದನ್ನು ಕಾಫಿ ಡೇ ಎಂದು ಮರುನಾಮಕರಣ ಮಾಡಲಾಗಿತ್ತು. ಐಟಿ ಅಧಿಕಾರಿಗಳ ದಾಳಿ ನಂತರ ಷೇರು ಮಾರುಕಟ್ಟೆಯಲ್ಲಿ ಕಾಫಿ ಡೇ ಸಮೂಹದ ಷೇರುಗಳ ಮೌಲ್ಯ ಶೇ.8 ರಷ್ಟು ಕುಸಿತ ಕಂಡಿವೆ.

ಯುಪಿಎ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ಸಚಿವರಾಗಿದ್ದ ಎಸ್‌.ಎಂ ಕೃಷ್ಣ ಕಳೆದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT