ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹7.5ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ

Last Updated 21 ಸೆಪ್ಟೆಂಬರ್ 2017, 6:58 IST
ಅಕ್ಷರ ಗಾತ್ರ

ಅಜ್ಜಂಪುರ: ಶಿವನಿ-ದಾಸರಹಟ್ಟಿ ನಡುವಿನ 9.6 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಎಚ್.ಶ್ರೀನಿವಾಸ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 206 ಕಡೂರು ಮತ್ತು ಎನ್‌ಎಚ್ –13 ಹೊಳಲ್ಕೆರೆ ಸಂಪರ್ಕಿಸುವ ಶಿವನಿ-ದಾಸರಹಟ್ಟಿ ನಡುವಿನ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿ, ಕಡೂರು-ಚಿತ್ರದುರ್ಗ ನಡುವೆ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ನೆರವಾಗಲಿದೆ.

ಜತೆಗೆ ಸ್ಥಳೀಯ ಶಿವನಿ, ದಂದೂರು, ತ್ಯಾಗದಕಟ್ಟೆ, ಕಲ್ಲೇನಹಳ್ಳಿ, ಜಿಜೆ ಕಟ್ಟೆ, ಭಕ್ತನಕಟ್ಟೆ, ದಾಸರಹಟ್ಟಿ, ರಂಗಾಪುರ ಗ್ರಾಮಸ್ಥರಿಗೂ ಹೆಚ್ಚಿನ ಅನುಕೂಲವಾಗಲಿದೆ’ ಎಂದು ತಿಳಿಸಿದರು.

ಕಾಮಗಾರಿಗೆ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ₹7.50 ಕೋಟಿ ಹಾಗೂ ರಸ್ತೆ ನಿರ್ವಹಣೆಗೆ ₹1.5 ಕೋಟಿ ನೀಡಲಾಗಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು, ನಿಗದಿತ ವೇಳೆಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಅವರು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ನಂಜುಂಡಪ್ಪ, ಶಿವನಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜಪ್ಪ, ಸದಸ್ಯ ಕರಿಬಸಪ್ಪ, ಕುಮಾರಸ್ವಾಮಿ, ಪಿಡಬ್ಲ್ಯುಡಿ ಎಇ ಶಿವಯೋಗಿ, ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT