ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲ್ಕಿ, ಕಡಬ, ಕೈರಂಗಳಕ್ಕೆ ಶೀಘ್ರ ಅಗ್ನಿಶಾಮಕ ಠಾಣೆ: ಸಚಿವ

Last Updated 21 ಸೆಪ್ಟೆಂಬರ್ 2017, 7:12 IST
ಅಕ್ಷರ ಗಾತ್ರ

ಮೂಡುಬಿದಿರೆ: ‘ರಾಜ್ಯದ ವಿವಿಧೆಡೆ 10 ಹೊಸ ಅಗ್ನಿಶಾಮಕ ಠಾಣೆಗಳ ಮಂಜೂ ರಾತಿಗೆ ಪ್ರಕ್ರಿಯೆಗಳು ನಡೆಯುತ್ತಿದ್ದು, ಇದರಲ್ಲಿ ಮೂಲ್ಕಿ ಮತ್ತು ಕಡಬ ಕೂಡ ಸೇರಿವೆ’ ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ಇಲ್ಲಿ ಹೇಳಿದರು. ಮಾರ್ಪಾಡಿ ಗ್ರಾಮದ ಕಡಲಕೆರೆ ಬಳಿ ನೂತನವಾಗಿ ನಿರ್ಮಾಣಗೊಂಡಿ ರುವ ಅಗ್ನಿಶಾಮಕ ಠಾಣೆ ಹಾಗೂ ವಸತಿಗೃಹ ಕಟ್ಟಡಗಳನ್ನು ಬುಧವಾರ ಉದ್ಘಾಟಿಸಿದ ಬಳಿಕ ಅವರು ಪತ್ರಕರ್ತರ ಜತೆ ಮಾತನಾಡಿದರು.

‘ಕಡಬದಲ್ಲಿ ಜಾಗ ಇಲಾಖೆಯ ಸ್ವಾಧೀನಕ್ಕೆ ಬಂದಿದೆ. ಮುಲ್ಕಿಯ ಕಾರ್ನಾಡು ಪ್ರದೇಶದಲ್ಲಿ ಜಾಗ ಗುರುತಿಸಿ ಡಿಜಿವೆಲ್ ಸರ್ವೆ ಕಾರ್ಯ ನಡೆಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಕೈರಂಗಳದಲ್ಲೂ ಅಗ್ನಿಶಾಮಕ ಠಾಣೆ ಸ್ಥಾಪಿಸಲು 2.5 ಎಕರೆ ಸ್ಥಳವನ್ನು ಕೈಗಾ ರಿಕಾ ಪ್ರದೇಶಾಭಿವೃದ್ಧಿ ನಿಗಮದ ವತಿ ಯಿಂದ ಕಾಯ್ದಿರಿಸಲಾಗಿದೆ. ಹೊಸ ತಾಲ್ಲೂಕು ಘೋಷಣೆಯಾಗಿರುವ ಕಾಪು, ಹೆಬ್ರಿ ಸೇರಿದಂತೆ ಬೈಂದೂರು, ಬ್ರಹ್ಮಾವರದಲ್ಲೂ ಅಗ್ನಿಶಾಮಕ ಠಾಣೆ ಮಂಜೂರಾತಿಗೆ ಕ್ರಮ ಕೈಗೊಳ್ಳ ಲಾಗುವುದು’ ಎಂದರು.

ಮೂಡುಬಿದಿರೆಯ ಪೊಲೀಸ್ ವಸತಿ ಗೃಹಗಳ ಸಮಸ್ಯೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ’ ತಿಳಿಸಿದರು. ಮೂಡುಬಿದಿರೆಯ ಸಂಚಾರ ಪೊಲೀಸ್‌ ಠಾಣೆ ಅಗತ್ಯತೆ ಬಗ್ಗೆ ಗಮನಸೆಳೆದಾಗ, ಸ್ಥಳೀಯ ಗಣ್ಯರು, ಪತ್ರಕರ್ತರು ಹಾಗೂ ಪೊಲೀಸ್‌ ಇಲಾಖೆಯ ಜತೆ ಜಂಟಿ ಸಭೆ ನಡೆಸಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಶಾಸಕ ಅಭಯಚಂದ್ರ ಜೈನ್ ಅವರಿಗೆ ಸೂಚಿಸಿದರು.

‘ಪೊಲೀಸ್ ಇಲಾಖೆಯಲ್ಲಿ ಶಿಸ್ತು ಕಾಯ್ದುಕೊಳ್ಳಲು ಹೆಚ್ಚಿನ ಆದ್ಯತೆ ನೀಡ ಲಾಗಿದೆ. ಪೊಲೀಸ್ ಇಲಾಖೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಹೊಸ ವಾಹ ನಗಳು ಹಾಗೂ ವಸತಿಗೃಹಗಳನ್ನು ನಿರ್ಮಿಸಲು ಆದ್ಯತೆ ನೀಡುತ್ತಿದ್ದೇವೆ. ಅಗ್ನಿಶಾಮಕ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ರಮಾ ನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಶಾಸಕ ಕೆ.ಅಭಯಚಂದ್ರ ಜೈನ್, ಜಿಲ್ಲಾ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆ ಗಳ ಇಲಾಖೆಯ ನಿರ್ದೇಶಕ ಕೆ.ಯು. ರಮೇಶ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಜಿ. ತಿಪ್ಪೇಸ್ವಾಮಿ, ಮುಖ್ಯ ಅಗ್ನಿಶಾಮಕ ಅಧಿಕಾರಿ ಟಿ.ಎನ್. ಶಿವಶಂ ಕರ್, ಮೂಡುಬಿದಿರೆ ತಹಶೀಲ್ದಾರ್ ಮಹಮ್ಮದ್ ಇಸಾಕ್, ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ಎಸ್. ಸುವರ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಮೂಡಾ ಅಧ್ಯಕ್ಷ ಸುರೇಶ್ ಪ್ರಭು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಯೋಜನಾ ಸಮಿತಿ ಸದಸ್ಯ ಸುರೇಶ್ ಕೋಟ್ಯಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT