ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1 ಲೀಟರ್‌ ಪೆಟ್ರೋಲ್‌ ನೈಜ ಬೆಲೆ ₹ 29.73, ತೆರಿಗೆ ಸೇರಿದರೆ ₹ 73.50 !

ಪೆಟ್ರೋಲ್ ಜಿಎಸ್‌ಟಿ ವ್ಯಾಪ್ತಿಗೆ ಬಂದರೆ ರಾಜ್ಯ ಸರ್ಕಾರಗಳಿಗೆ ನಷ್ಟ
Last Updated 21 ಸೆಪ್ಟೆಂಬರ್ 2017, 17:13 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ರಾಜ್ಯ ಸರ್ಕಾರಗಳ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಲಿದೆ. ಇದರಿಂದ ರಾಜ್ಯಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಬೇಡ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ಸಾಧ್ಯತೆಗಳಿವೆ ಎಂಬುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇತ್ತೀಚೆಗೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವಂತೆ ಸಲಹೆ ಮಾಡಿದ್ದರು. ಇದನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳೂ ಸಹ ವಿರೋಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪೆಟ್ರೋಲ್‌ ಮತ್ತು ಡೀಸೆಲ್‌ಗೆ ಗ್ರಾಹಕರು ದೇಶದಲ್ಲಿ ಶೇ.100 ರಷ್ಟು ತೆರಿಗೆ ಕಟ್ಟುತ್ತಿದ್ದಾರೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆಯೂ ಸೇರಿದೆ.

ಪ್ರಸ್ತುತ ಕಚ್ಛಾ ತೈಲವನ್ನು ಸಂಸ್ಕರಿಸಿದ ಬಳಿಕ 1 ಲೀಟರ್‌ ಪೆಟ್ರೋಲ್‌ಗೆ ₹ 29.53 ಹಾಗೂ ಡೀಸೆಲ್‌ಗೆ ₹ 29. 12 ಮೂಲ ಬೆಲೆ ಆಗುತ್ತದೆ. ಕೇಂದ್ರ ಸರ್ಕಾರ ಪೆಟ್ರೋಲ್‌ಗೆ ₹ 21.14  ಹಾಗೂ ಡೀಸೆಲ್‌ಗೆ ₹ 17.33 ಅಬಕಾರಿ ಸುಂಕ ವಿಧಿಸುತ್ತದೆ. ಇದರ ಜತೆಗೆ ರಾಜ್ಯ ಸರ್ಕಾರಗಳು ಸಹ ತೆರಿಗೆ ಹಾಕುವುದರಿಂದ ಪೆಟ್ರೋಲ್‌ ಬೆಲೆ ಇಂದು ₹ 70ರ ಗಡಿ ದಾಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದಲ್ಲಿ 2016–17ನೇ ಸಾಲಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಮೇಲೆ ವಿಧಿಸಿರುವ ತೆರಿಗೆಯಿಂದ ಒಟ್ಟು ₹ 9300 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇದೇ ಅವಧಿಯಲ್ಲಿ ತಮಿಳುನಾಡಿನಲ್ಲಿ ₹ 15000 ಕೋಟಿ ಸಂಗ್ರಹವಾಗಿದೆ ಎಂದು ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT