ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲುಶಿಕ್ಷೆಯಿಂದ ಬಿಡುಗಡೆಗೆ ಕೋರಿ ಅರ್ಜಿ

Last Updated 21 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ : ಗೂಢಚರ್ಯೆ ಮಾಡಿರುವ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಭಾರತದ ರಫೀಕ್‌ ಜತ್‌ ಅವರನ್ನು ಬಿಡುಗಡೆ ಮಾಡುವಂತೆ ಕೋರಿ ಭಾರತವು, ಪಾಕಿಸ್ತಾನದ ಕೋರ್ಟ್‌ ಅನ್ನು ಕೋರಿದೆ.

ರಫೀಕ್‌ ಅವರಿಗೆ ಇಸ್ಲಾಮಾಬಾದ್‌ ಹೈಕೋರ್ಟ್‌ ಐದು ವರ್ಷಗಳ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯು ಕಳೆದ ಮಾರ್ಚ್‌ 7ರಂದು ಮುಕ್ತಾಯವಾಗಿದೆ. ಆದ್ದರಿಂದ ಭಾರತವು ಅವರ ಬಿಡುಗಡೆಗೆ ಆದೇಶಿಸುವಂತೆ ಕೋರಿ ಬುಧವಾರ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಆದರೆ ತಾಂತ್ರಿಕ ಕಾರಣ ನೀಡಿ ಆ ಅರ್ಜಿಯನ್ನು ಹೈಕೋರ್ಟ್‌ ವಾಪಸ್‌ ಮಾಡಿದೆ.

‘ಈ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಪುನಃ ಗುರುವಾರ ಅರ್ಜಿ ಸಲ್ಲಿಸಲಾಗಿದೆ’ ಎಂದು ವಕೀಲ ಮಲಿಕ್‌ ನೂನ್‌ ಹೇಳಿದ್ದಾರೆ. ‘2012ರಲ್ಲಿ ಜತ್‌ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಆ ವೇಳೆ ಅವರು ಅಧಿಕೃತ ವೀಸಾ ಹೊಂದಿದ್ದರು ಕೂಡ ಅದನ್ನು ಗಣನೆಗೆ ತೆಗೆದುಕೊಂಡಿರಲಿಲ್ಲ’ ಎಂದು ಮಲಿಕ್‌ ಪತ್ರಕರ್ತರಿಗೆ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT