ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿ, ಸುವ್ಯವಸ್ಥೆಯ ಮಾತುಕತೆ

Last Updated 21 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ : ಇಸ್ಲಾಮಾಬಾದ್‌ನಲ್ಲಿ ಅಫ್ಗಾನಿಸ್ಥಾನದ ರಾಯಭಾರಿಯಾಗಿರುವ ಒಮರ್‌ ಜಾಖಿಲ್‌ವಾಲ್‌ ಅವರು, ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್‌ ಖಮರ್‌ ಜಾವೇದ್‌ ಬಾಜ್ವಾ ಅವರನ್ನು ಭೇಟಿಯಾಗಿ ಎರಡೂ ದೇಶಗಳ ನಡುವೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದರು.

ಅಫ್ಗಾನಿಸ್ಥಾನ ಮತ್ತು ಪಾಕಿಸ್ತಾನದ ಸಂಬಂಧವು ಕೆಲ ತಿಂಗಳುಗಳಿಂದ ತೀರಾ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಒಮರ್‌ ಹಾಗೂ ಖಮರ್‌ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.

ಪಾಕಿಸ್ತಾನದ ಜೊತೆ ಸಂಬಂಧವನ್ನು ವೃದ್ಧಿಸುವ ಕುರಿತಂತೆ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಫ್ಗಾನ್ ಅಧ್ಯಕ್ಷ ಅಶ್ರಫ್‌ ಘನಿ ಅವರು ಮಾತನಾಡಿದ ಬೆನ್ನಲ್ಲೇ ಈ ಇಬ್ಬರು ಗಣ್ಯರು ಭೇಟಿ ನಡೆಸಿ ಚರ್ಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT