ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿರಿನಗರ: ಮನೆ ಮೇಲೆ ಉರುಳಿದ ಮರಗಳು

Last Updated 21 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗಿರಿನಗರದ ನಾಗೇಂದ್ರ ಬ್ಲಾಕ್‌ನ 11ನೇ ಕ್ರಾಸ್‌ನ ರಸ್ತೆ ಬದಿಯಿದ್ದ ಎರಡು ಸಿಲ್ವರ್ ಓಕ್ ಮರಗಳು ಗಾಳಿಯಿಂದ ಬುಡಸಮೇತ ಮನೆಯ ಮೇಲೆ ಉರುಳಿ ಬಿದ್ದಿವೆ.

‘ನಗರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಈ ಮರಗಳ ಸುತ್ತಲಿನ ಮಣ್ಣು ಸಡಿಲಗೊಂಡಿತ್ತು. ಮಧ್ಯಾಹ್ನ ಜೋರಾಗಿ ಗಾಳಿ ಬೀಸಿದ್ದರಿಂದ ಬಿದ್ದಿವೆ’ ಎಂದು ಸ್ಥಳೀಯ ನಿವಾಸಿ ಸತೀಶ್ ತಿಳಿಸಿದರು.

‘ಮನೆಯ ಚಾವಣಿಗೆ ಹಾನಿಯಾಗಿದೆ. ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಮರಗಳ ಬಳಿ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಪಾರಾಗಿದ್ದಾರೆ.  ಸ್ಥಳದಲ್ಲಿ ಅಳವಡಿಸಿದ್ದ ಕೇಬಲ್‌ಗಳು ತುಂಡಾಗಿವೆ’ ಎಂದು ತಿಳಿಸಿದರು. ಬಿಬಿಎಂಪಿ ಅರಣ್ಯ ಘಟಕದ ಸಿಬ್ಬಂದಿ ಮರಗಳನ್ನು ತೆರವು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT