ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10ಸಾವಿರ ಬೋಧಕರ ಹುದ್ದೆ ಭರ್ತಿಗೆ ಕ್ರಮ: ಜಾವಡೇಕರ್‌

Last Updated 22 ಸೆಪ್ಟೆಂಬರ್ 2017, 6:38 IST
ಅಕ್ಷರ ಗಾತ್ರ

ಕಲಬುರ್ಗಿ: ‘ದೇಶದ ಎಲ್ಲ ಕೇಂದ್ರೀಯ ವಿದ್ಯಾಲಯ (ಕೆ.ವಿ)ಗಳಲ್ಲಿ ಖಾಲಿ ಇರುವ 10 ಸಾವಿರ ಬೋಧಕ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ 6 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, ಅವರು ತರಬೇತಿ ಪಡೆಯುತ್ತಿದ್ದಾರೆ. ಬಾಕಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು’ ಎಂದು ಹೇಳಿದರು.

‘ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 371 (ಜೆ) ಕಾಯ್ದೆಯಡಿ ಶೇ 8ರಷ್ಟು ಮೀಸಲಾತಿ ಕೊಡುವ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರೈತರಿಗೆ ಮೋಸ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲ ಮನ್ನಾ ವಿಷಯದಲ್ಲಿ ರಾಜ್ಯದ ರೈತರಿಗೆ ಮೋಸ ಮಾಡಿದ್ದಾರೆ. ರೈತರ ಬಗ್ಗೆ ಅವರಿಗೆ ನಿಜವಾಗಿಯೂ ಕಾಳಜಿ ಇದ್ದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲವನ್ನೂ ಮನ್ನಾ ಮಾಡಬೇಕಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT