ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದ ಅಪ್ಪುಗೋಳ ವಿರುದ್ಧ ಎಫ್‌ಐಆರ್‌ಗೆ ಮಧ್ಯಂತರ ತಡೆ

Last Updated 22 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಧಾರವಾಡ: ಠೇವಣಿದಾರರಿಗೆ ಹಣ ಮರಳಿಸದ ಆರೋಪದ ಮೇಲೆ ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೌಹಾರ್ದ ಸಹಕಾರಿ ಸಂಸ್ಥೆ ಅಧ್ಯಕ್ಷ ಆನಂದ ಅಪ್ಪುಗೋಳ ವಿರುದ್ಧ ದಾಖಲಾಗಿರುವ ಎಫ್ಐಆರ್‌ಗೆ ಇಲ್ಲಿನ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

‘ಠೇವಣಿದಾರರ ಹಣ ಮರಳಿಸದೇ ವಂಚಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ ಠೇವಣಿ ಹಣವನ್ನು ಬೇಕಾಬಿಟ್ಟಿ ಬಳಸಲಾಗಿದೆ' ಎಂದು ದೂರಿ ಇದೇ ತಿಂಗಳ 4ರಂದು ಬೆಳಗಾವಿಯ ಖಡೇಬಜಾರ್ ಪೊಲೀಸ್‌ ಠಾಣೆಯಲ್ಲಿ ಅಪ್ಪುಗೋಳ ಸೇರಿ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ದೂರು ದಾಖಲಿಸಿದ್ದರು.

ಬಳಿಕ ಮುಂಬೈನಲ್ಲಿದ್ದ ಆನಂದ ಅವರನ್ನು ಸೆ.17ರಂದು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆಗೆ ಆರೋಪಿಯ ಅಗತ್ಯವಿದೆ ಎನ್ನುವ ಪೊಲೀಸರ ಮನವಿಯನ್ನು ಪುರಸ್ಕರಿಸಿದ್ದ ಜೆಎಂಎಫ್‌ಸಿ ನ್ಯಾಯಾಲಯ 4 ದಿನ ಪೊಲೀಸ್‌ ವಶಕ್ಕೆ ನೀಡಿತ್ತು.

ನ್ಯಾಯಮೂರ್ತಿ ಆರ್.ಬಿ. ಬೂದಿಹಾಳ ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT