ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಲಭ್ಯ ಒದಗಿಸಿ; ಸರ್ಕಾರಿ ಶಾಲೆ ಸೇರುತ್ತೇನೆ: ಆಂಜನೇಯಗೆ ಸವಾಲು

Last Updated 22 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಸರ್ಕಾರಿ ಶಾಲೆಗಳನ್ನು ಉಳಿಸಿ ಅಂತ ಭಾಷಣ ಮಾಡಿದರೆ ಸಾಲದು. ಸರ್ಕಾರಿ ಶಾಲೆಗಳಿಗೆ ಖಾಸಗಿ ಶಾಲೆಗಳಂತೆ ಮೂಲ ಸೌಲಭ್ಯ ಕಲ್ಪಿಸಿ,  ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳ ಮಕ್ಕಳನ್ನು ಆ ಶಾಲೆಗೆ ಸೇರಿಸಿದರೆ, ನಾನು ಕೂಡ ಅಲ್ಲಿಗೆ ಸೇರುತ್ತೇನೆ....’ ಹೀಗೆ ಕಡ್ಡಿ ಮುರಿದಂತೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್. ಆಂಜನೇಯ ಅವರಿಗೆ ಸವಾಲು ಹಾಕಿದ ವಿದ್ಯಾರ್ಥಿನಿ ಹೆಸರು ನಯನಾ ಜೋಗಿ. ಈಕೆ ಖಾಸಗಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ.

ಜಿಲ್ಲಾ ಮಟ್ಟದ ‘ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ’ದಲ್ಲಿ ಸಚಿವ ಆಂಜನೇಯ ‘ಸರ್ಕಾರಿ ಶಾಲೆ ಉಳಿಸಬೇಕು’ ಎಂದು ಹೇಳಿಕೆ ನೀಡಿ ವೇದಿಕೆಯಿಂದ ಕೆಳಗಿಳಿಯುತ್ತಿರುವಾಗ, ಅವರನ್ನು ತಡೆದು ನಿಲ್ಲಿಸಿದ ನಯನಾ, ಈ ರೀತಿ ಸವಾಲು ಹಾಕಿದಳು.

‘ನನಗೂ ಸರ್ಕಾರಿ ಶಾಲೆಗೆ ಸೇರಲು ಇಷ್ಟ. ಆದರೆ, ಅಲ್ಲಿ ಸೌಲಭ್ಯಗಳಿಲ್ಲ. ಸರ್ಕಾರಿ ಶಾಲೆಗೆ ಉತ್ತಮ ಸೌಲಭ್ಯ ಕೊಡಿಸಿ. ನಾನು ಮಾತ್ರವಲ್ಲ, ನನ್ನ ಮೂವತ್ತು ಸ್ನೇಹಿತೆಯರ ಜತೆಗೂಡಿ ಸರ್ಕಾರಿ ಶಾಲೆಗೆ ಸೇರುತ್ತೇವೆ’ ಎಂದು ಹೇಳಿದಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT