ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಆರೋಪಿ ಸೆರೆ

Last Updated 22 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಹಾರೂಗೇರಿ (ಬೆಳಗಾವಿ ಜಿಲ್ಲೆ): ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ಹತ್ಯೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ್ದ ಕುರುಬಗೋಡಿ ಗ್ರಾಮದ ಉದ್ದಪ್ಪ ಗಾಣಿಗೇರ (28) ಎಂಬಾತನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಚಾಕಲೇಟ್‌ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಗುರುವಾರ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

‘ತಡರಾತ್ರಿಯಾದರೂ ಬಾಲಕಿ ಮನೆಗೆ ಬಾರದಿದ್ದಾಗ, ಪೋಷಕರು ಹುಡುಕಾಟ ನಡೆಸಿದ್ದಾರೆ. ಬಾಲಕಿಯನ್ನು ಉದ್ದಪ್ಪ ಎತ್ತಿಕೊಂಡು ಹೋಗುತ್ತಿದ್ದುದನ್ನು ನೋಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಂತರಉದ್ದಪ್ಪನ ಮನೆಗೆ ಹೋಗಿ ಪೋಷಕರು, ಮಗು ಎಲ್ಲಿ ಎಂದು ವಿಚಾರಿಸಿ, ಥಳಿಸಿದ್ದಾರೆ. ಬಳಿಕ ಆತನನ್ನು ನಮಗೆ ಒಪ್ಪಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಅತ ಕೊಲೆ ಮಾಡಿರುವುದಾಗಿ ಹೇಳಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಮೃತದೇಹ ಅರ್ಧಂಬರ್ಧ ಹೂತ ಸ್ಥಿತಿಯಲ್ಲಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ರಾಯಬಾಗ ಮತ್ತು ಹಾರೂಗೇರಿ ಪೊಲೀಸರ ನೇತೃತ್ವದಲ್ಲಿ ಮೃತದೇಹವನ್ನು ಹೊರತೆಗೆದು ಪಂಚನಾಮೆ ನಡೆಸಲಾಯಿತು. ಉದ್ದಪ್ಪನನ್ನು ಬಂಧಿಸಿದ ಪೊಲೀಸರು ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT