ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ವಿರುದ್ಧ ಪಿಣರಾಯಿ ವಾಗ್ದಾಳಿ

Last Updated 22 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಚೆನ್ನೈ : ‘ದೇಶದ ಮೇಲೆ ‘ಹಿಂದು, ಹಿಂದಿ, ಹಿಂದೂಸ್ತಾನ’ ಎಂಬ ಏಕರೂಪ ವ್ಯವಸ್ಥೆಯನ್ನು ಹೇರಲು ಆರ್‌ಎಸ್‌ಎಸ್‌ ಪ್ರಯತ್ನಿಸುತ್ತಿದೆ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಆರೋಪಿಸಿದರು.

ವಿದುತಲೈ ಚಿರುದಗಳ್‌ ಕಚ್ಚಿ (ವಿಸಿಕೆ) ಇಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯ ಸ್ವಾಯತ್ತ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ‘ಆರ್‌ಎಸ್‌ಎಸ್‌ ಮತ್ತು ಬಿಜೆಪಿ ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸಲು ಪ್ರಯತ್ನಿಸುತ್ತಿವೆ’ ಎಂದು ದೂರಿದರು.

‘ಬಹುಸಂಸ್ಕೃತಿಯನ್ನು ಒಪ್ಪಿಕೊಳ್ಳದ ಆರ್‌ಎಸ್‌ಎಸ್‌, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರಲು ಬಯಸುತ್ತಿದೆ. ಇದಕ್ಕಾಗಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸತತವಾಗಿ ಪ್ರಯತ್ನ ನಡೆಸುತ್ತಾ ಬರುತ್ತಿವೆ’ ಎಂದು ವಿಜಯನ್‌ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT