ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಮೇಲ್ಮನವಿ ನ್ಯಾಯಮಂಡಳಿಗೆ ಎನ್.ಕೆ. ಪಾಟೀಲ ನೇಮಕ

Last Updated 22 ಸೆಪ್ಟೆಂಬರ್ 2017, 19:55 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್.ಕೆ. ಪಾಟೀಲ ಅವರು ಮೂರು ವರ್ಷಗಳ ಅವಧಿಗೆ ವಿದ್ಯುತ್ ಮೇಲ್ಮನವಿ ನ್ಯಾಯಮಂಡಳಿಯ ನ್ಯಾಯಾಂಗ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಬೀದರ್ ಜಿಲ್ಲೆಯ ಪಾಟೀಲ ಅವರು 2000ದಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡು, 2016ರಲ್ಲಿ ನಿವೃತ್ತರಾಗುವ ವರೆಗೆ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಗೂ ಹೈಕೋರ್ಟ್ ರಚಿಸಿದ ಅಪೌಷ್ಟಿಕತೆ ತಡೆ ಸಮಿತಿಯ ಅಧ್ಯಕ್ಷರಾಗಿ ಅವರು ನೇಮಕಗೊಂಡಿದ್ದರು. 2011ರಲ್ಲಿ ಬೆಂಗಳೂರಿನ ಕೆರೆಗಳ ಸಂರಕ್ಷಣೆಯ ಬಗೆಗಿನ ವರದಿಯನ್ನು ಸಿದ್ಧಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT