ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಕ್ಕೆ 3000 ಹೊಸ ಬಸ್‌ಗಳು

Last Updated 22 ಸೆಪ್ಟೆಂಬರ್ 2017, 20:34 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸದ್ಯವೇ 1500 ಹೊಸ ಬಸ್‌ಗಳನ್ನು ಖರೀದಿಸಲಿದೆ ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ತಿಳಿಸಿದರು.

ಇದಲ್ಲದೆ ಇನ್ನೂ 1500 ಬಸ್ಸುಗಳನ್ನು ಖಾಸಗಿಯವರಿಂದ ಗುತ್ತಿಗೆ ಆಧಾರದಲ್ಲಿ ಪಡೆಯಲು ನಿರ್ಧರಿಸಲಾಗಿದೆ. ಒಟ್ಟು 3000 ಹೊಸ ಬಸ್‌ಗಳನ್ನು ಬಿಎಂಟಿಸಿ ಹೊಂದಲಿದೆ ಎಂದು ಅವರು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

1,500 ಹೊಸ ಬಸ್‌ಗಳನ್ನು ನೇರವಾಗಿ ಖರೀದಿಸಲು ಮುಖ್ಯಮಂತ್ರಿಯವರು ಈಗಾಗಲೇ ಸೂಚನೆ ನೀಡಿದ್ದಾರೆ. ಇದಕ್ಕೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗಲಿದೆ ಎಂದರು.

‘ಬಿಎಂಟಿಸಿಯಲ್ಲಿ ಬಹಳ ವರ್ಷಗಳಿಂದ ಹೊಸ ಬಸ್‌ಗಳನ್ನು ಖರೀದಿಸಿಲ್ಲ. ಸುಮಾರು 1500 ಬಸ್‌ಗಳು ಗುಜುರಿಗೆ ಹೋಗುವ ಸ್ಥಿತಿಯಲ್ಲಿವೆ. ವಿಶ್ವ ದರ್ಜೆಯ ನಗರದಲ್ಲಿ ಒಳ್ಳೆ ಗುಣಮಟ್ಟದ ಬಸ್‌ಗಳು ಇರಬೇಕು ಎಂಬುದು ಸರ್ಕಾರದ ಆಶಯ’ ಎಂದರು.

ಖಾಸಗಿಯವರಿಂದ ಗುತ್ತಿಗೆ ಆಧಾರದಲ್ಲಿ ಬಸ್‌ಗಳನ್ನು ಬಾಡಿಗೆಗೆ ಪಡೆಯಲಾಗುತ್ತದೆ. ಹೊರ ರಾಜ್ಯದ ಎರಡು ಕಂಪೆನಿಗಳು ಬಸ್‌ಗಳನ್ನು ಕೊಡಲು ಮುಂದೆ ಬಂದಿವೆ. ಗುತ್ತಿಗೆ ಕರಾರು ಹೇಗಿರಬೇಕು ಎಂಬುದನ್ನು ಮುಂಬರುವ ದಿನಗಳಲ್ಲಿ ನಿರ್ಧರಿಸಲಾಗುವುದು. ಈ ಬಸ್‌ಗಳಿಗೆ ಚಾಲಕರು ಮತ್ತು ನಿರ್ವಾಹಕರು ಬಿಎಂಟಿಸಿಯವರೇ ಇರುತ್ತಾರೆ ಎಂದು ರೇವಣ್ಣ ತಿಳಿಸಿದರು.

‘ಶಿವಮೊಗ್ಗ ಮತ್ತು ಚಿತ್ರದುರ್ಗದಲ್ಲಿ ಆದಷ್ಟು ಶೀಘ್ರವೇ ಸಾರಿಗೆ ವಿಭಾಗೀಯ ಕಚೇರಿಗಳನ್ನು ಆರಂಭಿಸಲಾಗುವುದು. ಡಿಪೋಗಳಲ್ಲಿ ಭಾರೀ ಪ್ರಮಾಣದಲ್ಲಿ ಸ್ಕ್ರ್ಯಾಪ್‌ ಸಂಗ್ರಹವಿದೆ. ಹರಾಜು ಮೂಲಕ ಅದರ ತೆರವಿಗೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಅವರು ತಿಳಿಸಿದರು.

‘ವಾಹನಗಳ ಮಾಲಿನ್ಯ ತಪಾಸಣಾ ನಕಲಿ ಕೇಂದ್ರಗಳು ಹುಟ್ಟಿಕೊಂಡಿರುವುದು ಗಮನಕ್ಕೆ ಬಂದಿದೆ. ದಾಖಲೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ರೇವಣ್ಣ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT