ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮನೆ ಮನೆಗೆ ಕಾಂಗ್ರೆಸ್‌’ ಇಂದಿನಿಂದ

Last Updated 22 ಸೆಪ್ಟೆಂಬರ್ 2017, 20:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಹಮ್ಮಿಕೊಂಡಿರುವ ‘ಮನೆ ಮನೆಗೆ ಕಾಂಗ್ರೆಸ್‌’ ಕಾರ್ಯಕ್ರಮಕ್ಕೆ ಮಹದೇವಪುರದಲ್ಲಿ ಶನಿವಾರ ಚಾಲನೆ ಸಿಗಲಿದೆ.

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ, ದಿನೇಶ್ ಗುಂಡೂರಾವ್, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗವಹಿಸುವರು.

ಸರ್ಕಾರದ ಸಾಧನೆಯ ಮಾಹಿತಿಗಳನ್ನು ಒಳಗೊಂಡ ಕಿರುಹೊತ್ತಿಗೆಗಳನ್ನು ಕಾಂಗ್ರೆಸ್ ನಾಯಕರು ಮಹದೇವಪುರ ವಿಧಾನ ಸಭಾ ಕ್ಷೇತ್ರದ ಅಗದೂರು ವಾರ್ಡ್‍ನಲ್ಲಿ ಮನೆ ಮನೆಗೆ ವಿತರಿಸಲಿದ್ದಾರೆ. ನಂತರ ಮಾರತ್‌ ಹಳ್ಳಿ ಆಟದ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ.

ಇದೇ ಸಂದರ್ಭದಲ್ಲಿ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಅಭಿಯಾನಕ್ಕೆ ಚಾಲನೆ ಸಿಗಲಿದೆ. ಮತಗಟ್ಟೆ ಸಮಿತಿ ಸದಸ್ಯರು ತಂಡಗಳಾಗಿ ಪ್ರತಿ ದಿನ 10ರಿಂದ 15 ಮನೆಗಳಿಗೆ ತೆರಳಿ ಕರಪತ್ರ ಮತ್ತು ಕಿರುಹೊತ್ತಿಗೆಯನ್ನು ಹಂಚಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT