ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ.ಗೆ ಮನವಿ ಸಲ್ಲಿಕೆ ಇಂದು

Last Updated 23 ಸೆಪ್ಟೆಂಬರ್ 2017, 6:01 IST
ಅಕ್ಷರ ಗಾತ್ರ

ಬೆಟಗೇರಿ: ‘ನನೆಗುದಿಗೆ ಬಿದ್ದಿರುವ ಗದಗ–ಕೋಟುಮಚಗಿ–ನರೇಗಲ್ಲ-ಗಜೇಂದ್ರಗಡ–ಇರಕಲ್ಲ–ಲಿಂಗಸೂರಿ ನವರೆಗೆ ರೈಲು ಮಾರ್ಗ ನಿರ್ಮಾಣ ಮಾಡುವ ಯೋಜನೆಯನ್ನು ಅನು ಷ್ಠಾನಗೊಳಿಸಬೇಕು’ ಎಂದು ಒತ್ತಾ ಯಿಸಿ ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೆ.23 ರಂದು ಮಧ್ಯಾಹ್ನ 3ಕ್ಕೆ ಮಲ್ಲಸಮುದ್ರದಲ್ಲಿರುವ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಮನವಿ ಸಲ್ಲಿಸಲಾಗುವುದು ಎಂದು ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈಲ್ವೆ ಹೋರಾಟ ಸಮಿತಿ ಸಭೆ ನಾಳೆ
ಗದಗ: ಬೆಟಗೇರಿ ರೈಲ್ವೆ ಹೋರಾಟ ಸಮಿತಿ ಸಭೆ ಸೆ.24 ರಂದು ಬೆಳಿಗ್ಗೆ 10.30ಕ್ಕೆ ಕಿತ್ತೂರ ಚನ್ನಮ್ಮ ಉದ್ಯಾನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಲ್ಲೂಕುಗಳಿಗೆ ಎಸಿಬಿ ಅಧಿಕಾರಿಗಳ ಭೇಟಿ

ಗದಗ: ಸಾರ್ವಜನಿಕರಿಂದ ದೂರು ಸ್ವೀಕರಿಸಲು ಹಾಗೂ ಬಾಕಿ ಉಳಿದಿರುವ ಅರ್ಜಿಗಳ ವಿಚಾರಣೆ, ಪ್ರಗತಿ ಪರಿಶೀಲನೆ ನಡೆಸಲು ತಾಲ್ಲೂಕು ಕೇಂದ್ರಗಳಿಗೆ ಎಸಿಬಿ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ಸೆ. 26ರಂದು ಗದಗ ತಾಲ್ಲೂಕು ಪಂಚಾಯ್ತಿ ಸಭಾಭವನ ಹಾಗೂ ಸೆ. 27ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ರೋಣ ತಾಲ್ಲೂಕು ಪಂಚಾಯ್ತಿ ಸಭಾಭವನ, ಮಧ್ಯಾಹ್ನ 3ರಿಂದ 5ರವರೆಗೆ ನರಗುಂದ ತಾಲ್ಲೂಕು ಪಂಚಾಯ್ತಿ ಸಭಾಭವನ, ಸೆ. 28ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಮುಂಡರಗಿ ತಾಲ್ಲೂಕು ಪಂಚಾಯ್ತಿ ಸಭಾಭವನ ಮತ್ತು ಮಧ್ಯಾಹ್ನ 3ರಿಂದ 5ರವರೆಗೆ ಶಿರಹಟ್ಟಿ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಎಸಿಬಿ ಅಧಿಕಾರಿಗಳು ಜನರಿಂದ ದೂರು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT