ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾಮಗಾರಿಗೆ ಚಾಲನೆ

Last Updated 23 ಸೆಪ್ಟೆಂಬರ್ 2017, 6:03 IST
ಅಕ್ಷರ ಗಾತ್ರ

ಗಜೇಂದ್ರಗಡ: ಕುಡಿಯುವ ನೀರು, ಕಾಂಕ್ರೀಟ್ ರಸ್ತೆ ಸೇರಿ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳ ಅನುಷ್ಠಾನಕ್ಕೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಪಟ್ಟಣದ ವಿವಿಧೆಡೆ ₹ 1.62 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರ ನೀಡಿದ ಅನುದಾನವನ್ನು ಸಂಪೂರ್ಣ ಸದ್ಬಳಕೆ ಮಾಡಿಕೊಂಡು ರೋಣ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.

ಅಶೋಕ ಬಾಗಮಾರ, ವೀರಣ್ಣ ಸೋನ್ನದ, ವೀರಣ್ಣ ಶೆಟ್ಟರ, ಪುರಸಭೆ ಅಧ್ಯಕ್ಷೆ ಸುಜಾತಾ ಚುಂಚಾ, ಪುರಸಭೆ ಸಿಒ ಹನಮಂತಮ್ಮ ನಾಯಕ, ಶಿವರಾಜ ಘೋರ್ಪಡೆ, ಮಂಗಳಾ ದೇಶಮುಖ, ಶಾರದಾ ರಾಠೋಡ, ಶ್ರೀಧರ ಗಂಜಿ ಗೌಡರ, ಶಶಿಧರ ಹೂಗಾರ, ಶಶಿಧರ ವಕ್ಕಲರ, ಕೊಟ್ರೇಶ ಚಿಲಕಾ, ರವಿ ಗಡೇದ, ಉಮೇಶ ರಾಠೋಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT