ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.26ರಂದು ಕೊಣ್ಣೂರು ಗ್ರಾಮಕ್ಕೆ ಉಪರಾಷ್ಟ್ರಪತಿ

Last Updated 23 ಸೆಪ್ಟೆಂಬರ್ 2017, 6:09 IST
ಅಕ್ಷರ ಗಾತ್ರ

ನರಗುಂದ: ನರಗುಂದ ತಾಲ್ಲೂಕನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಣೆ ಮಾಡುವ ಕಾರ್ಯಕ್ರಮ ಸೆ. 26ರಂದು ಕೊಣ್ಣೂರು ಗ್ರಾಮದಲ್ಲಿ ನಿಗದಿಯಾಗಿದ್ದು, ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭಾಗವಹಿಸಲಿದ್ದಾರೆ’ ಎಂದು ಶಾಸಕ ಬಿ.ಆರ್‌.ಯಾವಗಲ್‌ ಹೇಳಿದರು.

ಶುಕ್ರವಾರ ಸುದ್ದಿಗಾರರರ ಜತೆಗೆ ಮಾತನಾಡಿದ ಅವರು, ‘ಈ ತಾಲ್ಲೂಕಿನ 32 ಗ್ರಾಮಗಳ ಜನರು ಶೌಚಾಲಯ ಹೊಂದುವ ಮೂಲಕ ಇಡೀ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ನರಗುಂದ ತಾಲ್ಲೂಕು ಬಯಲು ಬಹಿರ್ದೆಸೆ ಮುಕ್ತ ಆಗುತ್ತಿರುವುದು ಸಂತಸ ತಂದಿದೆ’ ಎಂದರು.

‘ತಾಲ್ಲೂಕಿನ ರಾಷ್ಟ್ರವ್ಯಾಪಿ ಹೆಸರು ಮಾಡಿರುವ ತಿಪ್ಪೆ ಸಂಸ್ಕರಣ ಘಟಕವನ್ನೂ ಉಪರಾಷ್ಟ್ರಪತಿ ವೀಕ್ಷಣೆ ಮಾಡಲಿದ್ದಾರೆ. ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ ನಡೆಯಲಿದೆ. ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡ್ರ ಭಾಗವಹಿಸುವರು ಎಂದರು. ಜಿಲ್ಲಾ ಪಂಚಾಯ್ತಿ ಸದಸ್ಯ ರಾಜುಗೌಡ ಕೆಂಚನಗೌಡ್ರ, ರಾಜು ಕಲಾಲ, ಎಂ.ಬಿ.ಅರಹುಣಸಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT