ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಸಾವಿನ ಪ್ರಕರಣ: ತನಿಖೆಯನ್ನು ಸಿಐಡಿಗೆ ಒಪ್ಪಿಸಲು ಒತ್ತಾಯ; ಅರೆಬೆತ್ತಲೆ ಮೆರವಣಿಗೆ ನಡೆಸಲು ಯತ್ನ

Last Updated 23 ಸೆಪ್ಟೆಂಬರ್ 2017, 7:35 IST
ಅಕ್ಷರ ಗಾತ್ರ

ಮಂಗಳೂರು: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವಂತೆ ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ ನಡೆಸಲು ಯತ್ನಿಸಿದ ಕಾವ್ಯಾ ತಂದೆ ಲೋಕೇಶ್, ತಾಯಿ ಬೇಬಿ, ತಂಗಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ದಾಸ್ ಸೇರಿದಂತೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.                       

ಮಂಗಳೂರಿನ ಹಂಪನಕಟ್ಟೆ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಲು ಯತ್ನಿಸಿದರು. ಅಂಗಿ ಬಿಚ್ಚಿದ ಏಳು ಮಂದಿ ‌ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಕಾವ್ಯಾ(16) ಜುಲೈನಲ್ಲಿ ಅಸಹಜ ರೀತಿಯಲ್ಲಿ ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT