ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಯೋಜನೆ ಕುರಿತು ಗೋವಾ ನಾಯಕರೊಂದಿಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

Last Updated 23 ಸೆಪ್ಟೆಂಬರ್ 2017, 10:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ಕುರಿತು ಗೋವಾದ ನಾಯಕರೊಂದಿಗೆ ಚರ್ಚಿಸಲಾಗುವುದು ಎಂದು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಅಲ್ಲಿನ ವಿರೋಧಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು. ಇದೇ 25ರಂದು ರಾಜ್ಯದ ಬಿಜೆಪಿ ನಾಯಕರು ಮಹದಾಯಿ ಕುರಿತು ಚರ್ಚಿಸಲು ಗೋವಾ ಮುಖ್ಯಮಂತ್ರಿಯನ್ನು ಭೇಟಿಯಾಗಲು ತೆರಳುತ್ತಿದ್ದಾರೆ.

ಈಶ್ವರಪ್ಪ ಆಪ್ತ ಕಾರ್ಯದರ್ಶಿ ವಿನಯ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೊಲೀಸ್ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಪಹರಣ ಸಣ್ಣ ಪ್ರಕರಣವಲ್ಲ. ಯಡಿಯೂರಪ್ಪಗೆ ಸಂಬಂಧಿತ ಪ್ರಕರಣಗಳಲ್ಲಿ ಯಾವುದೇ ರಾಜಕೀಯವಿಲ್ಲ. ಅಪಹರಣ ಷಡ್ಯಂತ್ರ ನಡೆದಿರುವುದು ಅವರ ಮನೆಯಲ್ಲಿಯೇ. ಹೀಗಾಗಿ ಯಡಿಯೂರಪ್ಪ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ತನಿಖೆಗಳು ನಡೆಯುತ್ತಿವೆ ಎಂದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಹೆಚ್ಚಿನ ಪ್ರಗತಿಯಾಗಿದೆ, ಎಲ್ಲವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಇಂಧನ ಬೆಲೆ ಗಮನಾರ್ಹ ಕುಸಿದಿದೆ. ಪೆಟ್ರೋಲ್ ಬೆಲೆ ಕೂಡ ಕಡಿಮೆಯಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಬೆಲೆ ಕಡಿಮೆ ಮಾಡುವಲ್ಲಿ ವಿಫಲವಾಗಿದೆ. ಇಂಧನ ದರ ನಿಗದಿಯನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಕುರಿತು ಜಿಎಸ್‌ಟಿ ಕೌನ್ಸಿಲ್‌ನಲ್ಲಿ ನಮ್ಮ ಅಭಿಪ್ರಾಯ ಮಂಡಿಸುತ್ತೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಿಂದ ನೇರವಾಗಿ ಗದಗಕ್ಕೆ ತೆರಳಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡದ ಕೃಷಿ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT