ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರ ಕಾರ್ಮಿಕರ ಮುಷ್ಕರ ತಡೆಯಲು ಎಸ್ಮಾ ಜಾರಿ

Last Updated 23 ಸೆಪ್ಟೆಂಬರ್ 2017, 19:42 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪೌರ ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗುವುದನ್ನು ಕಡ್ಡಾಯಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಜಾರಿಗೊಳಿಸಿದೆ.

ಸರಬರಾಜುದಾರರು ಮತ್ತು ಗುತ್ತಿಗೆದಾರರ ಅಧೀನದಲ್ಲಿ ತೊಡಗಿಸಿಕೊಂಡಿರುವ ಎಲ್ಲ ಪೌರ ಕಾರ್ಮಿಕರು, ಆಟೊ ಸಹಾಯಕರು, ಕಾಂಪ್ಯಾಕ್ಟರ್ ಲೋಡರ್‌ಗಳು, ಚಾಲಕರಿಗೆ ಇದು ಅನ್ವಯ ಆಗಲಿದೆ. ಇವರು ಇನ್ನು ಒಂದು ವರ್ಷದವರೆಗೆ ಮುಷ್ಕರ ಹೂಡುವುದನ್ನು ನಿಷೇಧಿಸಲಾಗಿದೆ.

ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು, ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು ಉಂಟಾಗುವುದನ್ನು ತಡೆಗಟ್ಟುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಆದೇಶ ತಿಳಿಸಿದೆ.

2016ರಿಂದ ಕಸ ವಿಲೇವಾರಿಯನ್ನು ಎಸ್ಮಾ ವ್ಯಾಪ್ತಿಗೆ ತರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT