ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈಗೆ ನೋಟಿಸ್‌: ಠಾಣೆ ಎದುರು ಪ್ರತಿಭಟನೆ

Last Updated 23 ಸೆಪ್ಟೆಂಬರ್ 2017, 20:19 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಸಹ ಮಾಧ್ಯಮ ಪ್ರಮುಖ ವಿನಯ್ ಅವರ ಅಪಹರಣಕ್ಕೆ ಯತ್ನ ಹಾಗೂ ಹಲ್ಲೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೊಲೀಸರು ನೋಟಿಸ್‌ ನೀಡಿದ್ದನ್ನು ಖಂಡಿಸಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌ ಠಾಣೆ ಎದುರು ಸೇರಿದ್ದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮಲ್ಲೇಶ್ವರ ಉಪವಿಭಾಗದ ಎಸಿಪಿ ಎ.ಆರ್‌.ಬಡಿಗೇರ್‌ ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

‘ವಿನಯ್‌ ಅಪಹರಣಕ್ಕೆ ಯತ್ನ ಹಾಗೂ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ವಿರೋಧವಿಲ್ಲ. ಆದರೆ, ಪ್ರಕರಣದ ಹೆಸರಿನಲ್ಲಿ ಯಡಿಯೂರಪ್ಪ ಅವರಿಗೆ ನೋಟಿಸ್‌ ನೀಡಿದ್ದು ಖಂಡನೀಯ. ಅವರ ವಿಚಾರಣೆ ಅಗತ್ಯವಿದ್ದರೆ, ಅವರ ಮನೆಗೆ ಹೋಗಿ ಪೊಲೀಸರು ಮಾಹಿತಿ ಪಡೆದುಕೊಳ್ಳಲಿ. ಅವರನ್ನು ಠಾಣೆಗೆ ಕರೆಸಿ, ಗೌರವಕ್ಕೆ ಧಕ್ಕೆ ತರುವುದು ಸರಿಯಲ್ಲ. ಕೂಡಲೇ ಪೊಲೀಸರು, ನೋಟಿಸ್‌ ಹಿಂಪಡೆಯಬೇಕು’ ಎಂದು ಅವರು ಒತ್ತಾಯಿಸಿದರು.

ಶಾಸಕರಾದ ಅಶ್ವತ್ ನಾರಾಯಣ್‌, ರವಿ ಸುಬ್ರಹ್ಮಣ್ಯ, ಬಿಜೆಪಿ ನಗರ ಘಟಕದ ಅಧ್ಯಕ್ಷ ಪಿ.ಎನ್‌.ಸದಾಶಿವ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಿಂದಾಗಿ ಠಾಣೆಯ ಎದುರು ಪೊಲೀಸರು ಬಂದೋಬಸ್ತ್‌ ಕೈಗೊಂಡಿದ್ದರು.

ವಿನಯ್‌ ವಾಪಸ್‌: ಪ್ರಕರಣದ ಬಗ್ಗೆ ಮಾಹಿತಿ ನೀಡಲು ಕಚೇರಿಗೆ ಬರುವಂತೆ ದೂರುದಾರ ವಿನಯ್ ಅವರಿಗೆ ತನಿಖಾಧಿಕಾರಿ ಸೂಚಿಸಿದ್ದರು. ಅದರಿಂದಾಗಿ ವಿನಯ್‌, ಶನಿವಾರ ಬೆಳಿಗ್ಗೆ ಕಚೇರಿಗೆ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT