ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ’

Last Updated 24 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ’ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ.ತಿಮ್ಮೇಗೌಡ ಹೇಳಿದರು.

ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆಯು ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಡಾ.ದೇ.ಜವರೇಗೌಡ–ಒಂದು ನೆನಪು, ವಿಶ್ವಚೇತನ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಪ್ರದಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಒಂದು ಕಾಲದಲ್ಲಿ ನಮ್ಮ ರಾಜ್ಯ ಶಾಂತಿ, ಸೌಹಾರ್ದತೆಗೆ ಹೆಸರಾಗಿತ್ತು. ಬೇರೆ ರಾಜ್ಯದ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಇಲ್ಲಿ ಕಾರ್ಯನಿರ್ವಹಿಸಲು ಹಾತೊರೆಯುತ್ತಿದ್ದರು. ಆದರೆ ಇಂದು ಹಿಂಸೆ, ಹತ್ಯೆಗಳು ರಾಜ್ಯದಲ್ಲಿ ಹೆಚ್ಚುತ್ತಿವೆ’ ಎಂದು ಆತಂಕ ವ್ಯಕ್ತಪಡಿಸಿದರು.

ಐಪಿಎಸ್‌ ಅಧಿಕಾರಿ ಎಂ.ನಂಜುಂಡಸ್ವಾಮಿ,‘ಇಂದಿನ ಪತ್ರಕರ್ತರು ಕನ್ನಡಕ್ಕಿಂತ ಸಂಸ್ಕೃತ ಪದಗಳನ್ನು ಹೆಚ್ಚು ಬಳಸುತ್ತಿದ್ದಾರೆ. ಅವರಿಂದಲೇ ಭಾಷೆ ಅರ್ಧ ಹಾಳಾಗಿದೆ. ಆಡು ಭಾಷೆಯಲ್ಲಿ ಬರೆಯುವವರನ್ನು, ಮಾತನಾಡುವವರನ್ನು ಜನ ಕೀಳಾಗಿ ಕಾಣುತ್ತಿದ್ದಾರೆ. ಜನಪದವು ಸಂಸ್ಕೃತಿಯ ಕೆನೆಪದರು ಇದ್ದಂತೆ. ಆಡುನುಡಿ ಬಳಸಿದಾಗ ಭಾಷೆ ಉಳಿಯುತ್ತದೆ’ ಎಂದು ಹೇಳಿದರು.

ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ 60 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT