ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆ

Last Updated 24 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ನೆಫ್ರೊ-ಯುರಾಲಜಿ ಸಂಸ್ಥೆಯು ಡಾ.ಟಿ.ಎಸ್‌.ಜಯರಾಂ ಸ್ಮರಣಾರ್ಥ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ 20 ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

‘20 ವರ್ಷಗಳಿಂದ ಶಸ್ತ್ರಚಿಕಿತ್ಸಾ ಕಾರ್ಯಾಗಾರವನ್ನು ಮಾಡುತ್ತಿದ್ದೇವೆ. ಈ ವರ್ಷ, ರಾಜ್ಯದಾದ್ಯಂತ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳನ್ನು ಆಯ್ಕೆ ಮಾಡಿ, ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದೇವೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಎಂ.ಶಿವಲಿಂಗಯ್ಯ ತಿಳಿಸಿದರು.

‘ದೇಶದ ವಿವಿಧ ಭಾಗಗಳ ತಜ್ಞ ವೈದ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಶಸ್ತ್ರಚಿಕಿತ್ಸೆ ಕುರಿತು ಅವರು ಉಪನ್ಯಾಸ ನೀಡಿದರು. ಇದು ರಾಜ್ಯದ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT